ಮದೆನಾಡು, ಆ. ೨೭: ಮದೆ ಗ್ರಾಮದ ಸುತ್ತಮುತ್ತಲಿನ ರೆಸಾರ್ಟ್, ಹೋಂ ಸ್ಟೇ ಮತ್ತು ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಹೊರ ರಾಜ್ಯದ ಕಾರ್ಮಿಕರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದರು.
ಮಡಿಕೇರಿ ಗ್ರಾಮಾಂತರ ಸಬ್ ಇನ್ಸ್ಪೆಕ್ಟರ್ ವೆಂಕಟ್ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಕಾರ್ಮಿಕರ ಆಧಾರ್ ಹಾಗೂ ಇತರ ದಾಖಲಾತಿಗಳನ್ನು ಪರಿಶೀಲಿಸಿ ಮಾಲೀಕರಿಂದ ಮಾಹಿತಿ ಪಡೆದುಕೊಂಡರು. ಕೆಲಸದಲ್ಲಿರುವ ಹೊರ ರಾಜ್ಯದ ಕಾರ್ಮಿಕರ ಸಂಪೂರ್ಣ ಮಾಹಿತಿಯನ್ನು ಆದಷ್ಟು ಬೇಗ ಸಂಬAಧಿಸಿದ ಠಾಣೆಗಳಿಗೆ ತಲುಪಿಸಬೇಕಾಗಿ ಠಾಣಾಧಿಕಾರಿ ಮನವಿ ಮಾಡಿದರು. - ಇಬ್ರಾಹಿಂ