ಮಡಿಕೇರಿ ಆ. ೨೭: ಕೊಡವರ ಹತ್ಯೆಯಾದ ದೇವಟ್ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು.
ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಹಾಗೂ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು.
ಟಿಪ್ಪು ಸಂಚಿನಿAದ ದೇವಟ್ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟಿçÃಯ ಸ್ಮಾರಕ ನಿರ್ಮಾಣ ಮಾಡಬೇಕು ಮತ್ತು ಕೊಡವರ ನರಮೇಧವನ್ನು ವಿಶ್ವ ರಾಷ್ಟçಸಂಸ್ಥೆ ಯುಎನ್ಒ ಅಂತರರಾಷ್ಟಿçÃಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಇದೇ ಸಂದರ್ಭ ಒತ್ತಾಯಿಸಿದರು.
ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಆದಿಮಸಂಜಾತ ಕೊಡವ ಜನಾಂಗೀಯ ಬುಡಕಟ್ಟು ಜನಾಂಗಕ್ಕೆ ಎಸ್ಟಿ ಟ್ಯಾಗ್ ಕಲ್ಪಿಸಬೇಕು, ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಖಾತ್ರಿ ಒದಗಿಸಬೇಕು, ಸಂವಿಧಾನದ ೨೫ ಮತ್ತು ೨೬ನೇ ವಿಧಿಗಳ ಅಡಿಯಲ್ಲಿ ಕೊಡವ ಸಾಂಪ್ರದಾಯಿಕ ``ಸಂಸ್ಕಾರ ಗನ್'' ಹಕ್ಕಿಗೆ ಸಾಂವಿಧಾನಿಕ ಭದ್ರತೆ ನೀಡಬೇಕು ಎಂಬ ಒತ್ತಾಯವನ್ನು ಮುಂದಿಟ್ಟುಕೊAಡು ಕಳೆದ ಅನೇಕ ವರ್ಷಗಳಿಂದ ಸಿಎನ್ಸಿ ಸಂಘಟನೆ ಹೋರಾಟ ನಡೆಸುತ್ತಾ ಬಂದಿದೆ.
ಈ ಬೇಡಿಕೆಗಳು ಶೀಘ್ರ ಈಡೇರಲಿ ಎಂದು ಹಿರಿಯರಲ್ಲಿ ಪ್ರಾರ್ಥಿಸಿರುವುದಾಗಿ ಅವರು ತಿಳಿಸಿದರು. ಪಟ್ಟಮಾಡ ಕುಶ ಹಾಗೂ ಮಂದಪAಡ ಮನೋಜ್ ಉಪಸ್ಥಿತರಿದ್ದು ಪುಷ್ಪ ನಮನ ಸಲ್ಲಿಸಿದರು.