ಮಡಿಕೇರಿ, ಆ. ೨೭: ಜಿಲ್ಲೆಯ ವಿವಿಧೆಡೆ ಮಕ್ಕಳಿಗೆ ವೇಷ ಧರಿಸುವ ಮೂಲಕ ಯುಗಪುರುಷ - ಜಗಪುರುಷ ಶ್ರೀಕೃಷ್ಣನನ್ನು ಸ್ಮರಿಸಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗಿದೆ. ಧರ್ಮಾತೀತವಾಗಿ ಬಹಳಷ್ಟು ಮಂದಿ ತಾಯಂದಿರು ತಮ್ಮ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯರ ಅಲಂಕಾರ ಮಾಡಿ ಕಣ್ತುಂಬಿಕೊAಡರು. ತೊಟ್ಟಿಲಲ್ಲಿ ಆಡುವ ಮಕ್ಕಳಿಂದ ಹಿಡಿದು ಪ್ರೌಢಾವಸ್ಥೆಯ ಮಕ್ಕಳವರೆಗೂ ಕೃಷ್ಣ ರಾಧೆಯರ ವೇಷ ಧರಿಸಿ ಸಂಭ್ರಮಿಸಿದರು. ಕೆಲವೊಂದು ನರ್ಸರಿ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಂದ ಕೃಷ್ಣ ರಾಧೆಯರ ವೇಷಭೂಷಣ ಸ್ಪರ್ಧೆಯೂ ಏರ್ಪಟ್ಟಿತ್ತು. ಇದರೊಂದಿಗೆ ಮನೆಗಳಲ್ಲಿ ಪೂಜೆ ಸಲ್ಲಿಸಲಾಯಿತು.ಮಡಿಕೇರಿ: ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಣನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಬಣ್ಣಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಮಹಾಭಾರತದಲ್ಲಿ ಶ್ರೀಕೃಷ್ಣನ ಬಗ್ಗೆ ಒಳ್ಳೆಯ ಸಂದೇಶ ತಿಳಿಯುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ ಎಂದರು.

ಕವಿಗಳು, ಸಾಹಿತಿಗಳು ಶ್ರೀಕೃಷ್ಣನನ್ನು ವಿವಿಧ ರೀತಿಯಲ್ಲಿ ವರ್ಣಿಸಿದ್ದಾರೆ. ದಾಸ ಪರಂಪರೆ ಸೃಷ್ಟಿಯಾಗಿದ್ದೇ ಶ್ರೀಕೃಷ್ಣರಿಂದ ಎಂದರೆ ತಪ್ಪಾಗಲಾರದು. ಪ್ರತಿಯೊಬ್ಬರೂ ಭಗವದ್ಗೀತೆಯನ್ನು ಅಧ್ಯಯನ ಮಾಡಿದ್ದಲ್ಲಿ ಶ್ರೀಕೃಷ್ಣನ ಮಹತ್ವ ಬಗ್ಗೆ ಅರಿವಾಗುತ್ತದೆ. ಶ್ರೀಕೃಷ್ಣನ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಪತ್ರಕರ್ತ ಚಿ.ನಾ.ಸೋಮೇಶ್ ಮಾತನಾಡಿ ಶ್ರೀಕೃಷ್ಣ ಜಾತ್ಯಾತೀತ, ಮೇರು ವ್ಯಕ್ತಿತ್ವ ಹೊಂದಿದ್ದರು. ಶ್ರೀಕೃಷ್ಣನ ಇತಿಹಾಸದ ಬಾಲ್ಯವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು.

ಇಸ್ಕಾನ್ ಸಂಸ್ಥೆಯ ಸುಧೀರ್‌ಪ್ರಭು ಮಾತನಾಡಿ ೫೨೫ ವರ್ಷಗಳ ಹಿಂದೆ ಜನ್ಮ ತಾಳಿದ ಶ್ರೀಕೃಷ್ಣನ ಆದರ್ಶ ಗುಣಗಳು ಸಾರ್ವಕಾಲಿಕವಾಗಿವೆ ಎಂದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೋರನ ಸರಸ್ವತಿ ಮಾತನಾಡಿದರು.

ಇಸ್ಕಾನ್ ಸಂಸ್ಥೆಯ ಚೈತನ್ಯದಾಸ್ ಪ್ರಭು, ಬಸವರಾಜ ಪ್ರಭು, ಕಂಚಿ ಕಾಮಾಕ್ಷಮ್ಮ ದೇವಾಲಯ ಸಮಿತಿಯ ಅಧ್ಯಕ್ಷ ಪವನ್ ಜಿ.ಬಿ., ಗೌರವಾಧ್ಯಕ್ಷರಾದ ಜಿ.ಜಿ.ಬಾಲಕೃಷ್ಣ ಇತರರು ಇದ್ದರು. ನಿವೃತ್ತ ಶಿಕ್ಷಕರಾದ ಬಿ.ಸಿ. ಶಂಕರಯ್ಯ ನಾಡಗೀತೆ ಹಾಡಿ, ಶ್ರೀಕೃಷ್ಣನ ಕುರಿತು ಹಾಡು ಹಾಡಿ ಗಮನ ಸೆಳೆದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಸ್ವಾಗತಿಸಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

ಪೆರಾಜೆ: ಯುವ ಸ್ಫೂರ್ತಿ ಸಂಘ ಕರಂಟಡ್ಕ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು. ಇದರ ಪ್ರಯುಕ್ತ ಬೆಳಿಗ್ಗೆಯಿಂದ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿವೃತ್ತರಾದ ಶಾಲಾ ಶಿಕ್ಷಕರಾದ ಪದ್ಮಯ್ಯ ಮಾಸ್ತರ್ ಅಡ್ಕದಮನೆ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಯುವ ಸ್ಫೂರ್ತಿ ಸಂಘದ ಅಧ್ಯಕ್ಷ ಸತೀಶ್ ಮೂಲೆಹಿತ್ಲು ಅವರು ವಹಿಸಿದ್ದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಯತೀಶ್ ಎನ್.ಎಂ, ಶಾಲಾ ಮುಖ್ಯ ಶಿಕ್ಷಕ ಮೋಹನ್ ಪೆರುಮುಂಡ, ಸಂಘದ ಅಧ್ಯಕ್ಷ ಮನೋಜ್ ಕುಂಟಿಕಾನ ಉಪಸ್ಥಿತರಿದ್ದರು.

ಕುಶಾಲನಗರ: ಕುಶಾಲನಗರ ಡ್ರೀಮ್ಸ್ ಡೇ ಕೇರ್ ಸಂಸ್ಥೆ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮ ದಿನ ಅಂಗವಾಗಿ ಸರಳ ಕಾರ್ಯಕ್ರಮ ನಡೆಯಿತು.

ಕುಶಾಲನಗರ ಕೊಡವ ಸಮಾಜ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಶ್ರೀ ಕೃಷ್ಣ ಮತ್ತು ರಾಧೆ ವೇಷಧರಿಸಿ ಸಂಭ್ರಮಿಸಿದರು. ಶ್ರೀ ಕೃಷ್ಣ ರಾಧೆ ವೇಷ ಸ್ಪರ್ಧೆಯಲ್ಲಿ ವಿಜೇತರಾದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭ ಸಂಘದ ಪ್ರಮುಖರಾದ ಟಿ.ಆರ್. ಪ್ರಭುದೇವ್, ವನಿತಾ ಚಂದ್ರಮೋಹನ್ ಅವರು ದಿನದ ಮಹತ್ವದ ಬಗ್ಗೆ ಮಾತನಾಡಿದರು. ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಹೋಬಳಿ ಘಟಕದ ಬೆಳ್ಳಿ ಮಹೋತ್ಸವ ಅಂಗವಾಗಿ ಸಂಸ್ಥೆಯ ಪ್ರಮುಖರಿಗೆ ಕಿರುಕಾಣಿಕೆ ನೀಡಲಾಯಿತು.

ಈ ಸಂದರ್ಭ ಡ್ರೀಮ್ಸ್ ಡೇ ಕೇರ್ ಸಂಸ್ಥೆಯ ಚೈತನ್ಯ ಸಿ. ಮೋಹನ್, ಪಲ್ಲವಿ, ವಿನುತ ಮತ್ತು ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಶನಿವಾರಸಂತೆ: ಪಟ್ಟಣದ ಕಾವೇರಿ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಥಮಿಕ ಶಾಲಾ ಮಕ್ಕಳಿಗೆ ಛದ್ಮವೇಷ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಜ್ಯೋತಿ ಬೆಳಗಿಸಿ ತೊಟ್ಟಿಲನ್ನು ತೂಗುವ ಮೂಲಕ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಎಚ್.ಎನ್. ದೇವರಾಜ್ ಮಾತನಾಡಿ, ಶ್ರೀಕೃಷ್ಣನ ಬಾಲ್ಯದ ಉತ್ತಮ ಗುಣಗಳನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಉಪನ್ಯಾಸಕ ಮಂಜುನಾಥ್ ಮಾತನಾಡಿ, ಕೃಷ್ಣ ಚರಿತ್ರೆಯನ್ನು ಮಕ್ಕಳಿಗೆ ಕಥೆ ಹೇಳುವ ಮೂಲಕ ಅರ್ಥಪೂರ್ಣವಾಗಿ ತಿಳಿಸಿಕೊಟ್ಟರು.

ಮಕ್ಕಳು ಹಾಡು, ನೃತ್ಯ, ಭಾಷಣ ಹಾಗೂ ಕೃಷ್ಣನ ವಿವಿಧ ವೇಷಗಳನ್ನು ಧರಿಸಿ ಪೋಷಕರ ಮನರಂಜಿಸಿದರು. ಪುಟಾಣಿ ಮಕ್ಕಳ ರಾಧೆ-ಕೃಷ್ಣನ ವೇಷ-ಭೂಷಣ ಹಾಗೂ ನೃತ್ಯ ವಿವಿಧ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆ ಕಾರ್ಯಕ್ರಮವನ್ನು ಮಕ್ಕಳೇ ನಿರ್ವಹಿಸಿ ಮೆಚ್ಚುಗೆ ಗಳಿಸಿದರು. ಮುಖ್ಯಶಿಕ್ಷಕರು, ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.

ಮುಳ್ಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಶನಿವಾರಸಂತೆ ಪಟ್ಟಣದ ಬ್ರೆöÊನಿ ಬಿಜ್ ಬಾಲ ವಿಕಾಸನ ಸಂಸ್ಥೆಯ ವತಿಯಿಂದ ಗುಡುಗಳಲೆ ಆರ್‌ವಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಬಾಲ ವಿಕಾಸನ ಸಂಸ್ಥೆಯ ಪುಟಾಣಿಗಳಿಗೆ ಕೃಷ್ಣ ರುಕ್ಮಿಣಿಯ ಛದ್ಮವೇಷ ಸ್ಫರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಗೀತಾ ಹರೀಶ್ ಉದ್ಘಾಟಿಸಿದರು.

ಬಳಿಕ ಮಾತನಾಡಿ, ಬಾಲ್ಯ ವಿಕಾಸನ ಹಂತದಲ್ಲಿ ಪುಟಾಣಿಗಳಿಗೆ ಛದ್ಮವೇಷÀದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದ್ದರಿಂದ ಪುಟಾಣಿಗಳಲ್ಲಿ ಪ್ರತಿಭೆ ಹೊರಹೊಮ್ಮಲು ಸಹಕಾರಿಯಾಗುತ್ತದೆ ಎಂದರು. ಶನಿವಾರಸಂತೆ ಕ್ಲಸ್ಟರ್ ಸಿಆರ್‌ಪಿ ದಿನೇಶ್ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಚೇತನ್ ಅಧ್ಯಕ್ಷತೆ ವಹಿಸಿದ್ದರು ಈ ಸಂದರ್ಭ ಸಂಸ್ಥೆಯ ಖಜಾಂಜಿ ಕೃತಿಕ ಹಾಜರಿದ್ದರು.

ಮಡಿಕೇರಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವೀರಾಜಪೇಟೆ ಶ್ರೀ ಕಾವೇರಿ ಆಶ್ರಮದ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ಶ್ರೀ ಸ್ವಾಮಿ ಆತ್ಮಾನಂದ ಪುರಿಗಳ ಅಧ್ಯಕ್ಷತೆಯಲ್ಲಿ ಕ್ಷೇತ್ರ ಅಭಿವೃದ್ಧಿ ಮತ್ತು ಲೋಕಕಲ್ಯಾಣ್ಕಾಗಿ ಶ್ರೀ ಮಹಾಗಣಪತಿ ಹೋಮ, ಶ್ರೀ ವಿಷ್ಣು ಸಹಸ್ರನಾಮ ಹೋಮ ಹಾಗೂ ಶ್ರೀ ಮಹಾವಿಷ್ಣುವಿಗೆ ಪಂಚಾಮೃತ ಅಭಿಷೇಕ ನವಕ ಕಲಶ ಅಭಿಷೇಕ ಮಹಾಪೂಜೆಯನ್ನು ಶ್ರೀ ಶ್ರೀನಿವಾಸ ಭಟ್ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು. ಪೂಜಾ ಕಾರ್ಯದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.ಮಡಿಕೇರಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವೀರಾಜಪೇಟೆ ಶ್ರೀ ಕಾವೇರಿ ಆಶ್ರಮದ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ಶ್ರೀ ಸ್ವಾಮಿ ಆತ್ಮಾನಂದ ಪುರಿಗಳ ಅಧ್ಯಕ್ಷತೆಯಲ್ಲಿ ಕ್ಷೇತ್ರ ಅಭಿವೃದ್ಧಿ ಮತ್ತು ಲೋಕಕಲ್ಯಾಣ್ಕಾಗಿ ಶ್ರೀ ಮಹಾಗಣಪತಿ ಹೋಮ, ಶ್ರೀ ವಿಷ್ಣು ಸಹಸ್ರನಾಮ ಹೋಮ ಹಾಗೂ ಶ್ರೀ ಮಹಾವಿಷ್ಣುವಿಗೆ ಪಂಚಾಮೃತ ಅಭಿಷೇಕ ನವಕ ಕಲಶ ಅಭಿಷೇಕ ಮಹಾಪೂಜೆಯನ್ನು ಶ್ರೀ ಶ್ರೀನಿವಾಸ ಭಟ್ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು. ಪೂಜಾ ಕಾರ್ಯದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.ಶನಿವಾರಸAತೆ: ಸಮೀಪದ ಕೊಡ್ಲಿಪೇಟೆ ಕಲ್ಲುಮಠದ ಎಸ್.ಕೆ.ಎಸ್.ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿAದ ಆಚರಿಸಲಾಯಿತು.

ಕಿರಿಯ ಪ್ರಾಥಮಿಕ ಶಾಲೆಯ ಚಿಣ್ಣರು ಕೃಷ್ಣ-ರಾಧೆಯ ವೇಷಭೂಷಣವನ್ನು ಧರಿಸಿ ಕಣ್ಮನಗಳನ್ನು ತಣಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಮಹಾಂತ ಸ್ವಾಮೀಜಿ ಆಶೀರ್ವಚನ ನೀಡಿ ಶುಭ ಹಾರೈಸಿದರು. ಉಪಾಧ್ಯಕ್ಷ ಡಿ.ಎಸ್. ವಿಶ್ವನಾಥ್, ಆಡಳಿತಾಧಿಕಾರಿ ಬಿ.ಎಸ್. ಪ್ರದೀಪ್, ಮುಖ್ಯಶಿಕ್ಷಕ ಎಚ್.ಎಂ. ಅಭಿಲಾಷ್, ಶಿಕ್ಷಕರು, ಸಿಬ್ಬಂದಿ, ಪೋಷಕರು ಹಾಜರಿದ್ದರು.

ಸೋಮವಾರಪೇಟೆ: ಸಮೀಪದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿAದ ಆಚರಿಸಲಾಯಿತು. ದಿನದ ಮಹತ್ವದ ಬಗ್ಗೆ ಶಿಕ್ಷಕಿ ಮಹದೇವಮ್ಮ ಮತ್ತು ಮೇಘನಾ ಅವರುಗಳು ಮಕ್ಕಳಿಗೆ ವಿವರಿಸಿದರು. ಜನ್ಮಾಷ್ಟಮಿಯ ಅಂಗವಾಗಿ ಶಾಲಾ ಮಕ್ಕಳು ಶ್ರೀ ಕೃಷ್ಣ ಹಾಗೂ ರಾಧೆಯರ ವೇಷ ಭೂಷಣ ಧರಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಇದರೊಂದಿಗೆ ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಎನ್.ಎ. ರೇವತಿ, ಆಡಳಿತ ಮಂಡಳಿಯ ಹರಿಣಿ ಸೇರಿದಂತೆ ಶಿಕ್ಷಕರು ಭಾಗವಹಿಸಿದ್ದರು.

ಸೋಮವಾರಪೇಟೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಸಮೀಪದ ವಿಶ್ವಮಾನವ ಕುವೆಂಪು ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀ ಕೃಷ್ಣ ಹಾಗೂ ಸ್ವಾತಂತ್ರö್ಯ ಹೋರಾಟಗಾರರ ಛದ್ಮವೇಷ ಸ್ಪರ್ಧೆ ಆಯೋಜಿಸಲಾಗಿತ್ತು.

ಸ್ಪರ್ಧೆಯಲ್ಲಿ ಪುಟಾಣಿಗಳು ವಿವಿಧ ವೇಷಭೂಷಣಗಳನ್ನು ಧರಿಸಿ ಶ್ರೀಕೃಷ್ಣ ಹಾಗೂ ಸ್ವಾತಂತ್ರö್ಯ ಹೋರಾಟಗಾರರ ರೂಪದಲ್ಲಿ ಕಂಗೊಳಿಸಿದರು. ಸೋಮವಾರಪೇಟೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಸಮೀಪದ ವಿಶ್ವಮಾನವ ಕುವೆಂಪು ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀ ಕೃಷ್ಣ ಹಾಗೂ ಸ್ವಾತಂತ್ರö್ಯ ಹೋರಾಟಗಾರರ ಛದ್ಮವೇಷ ಸ್ಪರ್ಧೆ ಆಯೋಜಿಸಲಾಗಿತ್ತು.

ಸ್ಪರ್ಧೆಯಲ್ಲಿ ಪುಟಾಣಿಗಳು ವಿವಿಧ ವೇಷಭೂಷಣಗಳನ್ನು ಧರಿಸಿ ಶ್ರೀಕೃಷ್ಣ ಹಾಗೂ ಸ್ವಾತಂತ್ರö್ಯ ಹೋರಾಟಗಾರರ ರೂಪದಲ್ಲಿ ಕಂಗೊಳಿಸಿದರು. ತೀರ್ಪುಗಾರರಾಗಿ ಶಿಕ್ಷಕಿ ಸುಮತಿ ಕಾರ್ಯನಿರ್ವಹಿಸಿದರು. ಕಾರ್ಯ ಕ್ರಮದಲ್ಲಿ ಆಡಳಿತ ಮಂಡಳಿ ನಿರ್ದೇಶಕಿ ಚಂದ್ರಿಕಾ ಕುಮಾರ್, ಮುಖ್ಯ ಶಿಕ್ಷಕಿ ಬೀನಾ, ಇಂದಿರಾ, ಅರುಣ ಸೇರಿದಂತೆ ಇತರರು ಉಪಸ್ಥಿತರಿದ್ದರು.ನಾಪೋಕ್ಲು : ನಾಪೋಕ್ಲು ಸಮೀಪದ ಅಯ್ಯಂಗೇರಿಯ ಚಿನ್ನತ್ತಪ್ಪ (ಶ್ರೀಕೃಷ್ಣ ) ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಸೋಮವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ತೀರ್ಥ ಪ್ರಸಾದ ವಿತರಣೆ ನಂತರ ಆಗಮಿಸಿದ ಭಕ್ತಾದಿಗಳಿಗೆ ಅನ್ನದಾನವನ್ನು ಏರ್ಪಡಿಸಲಾಗಿತ್ತು.ಸಿದ್ದಾಪುರ : ಸಿದ್ದಾಪುರದ ಶ್ರೀ ಕೃಷ್ಣ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿದ್ಯಾಮಂದಿರದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು. ನಂತರ ಪುಟಾಣಿ ಮಕ್ಕಳು ಶ್ರೀಕೃಷ್ಣ ಮತ್ತು ರಾಧೆ ವೇಷಧರಿಸಿ ಗಮನ ಸೆಳೆದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ವಿದ್ಯಾಮಂದಿರದ ಪ್ರಮುಖರಾದ ರಸಿತ ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.

*ಗೋಣಿಕೊಪ್ಪ: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಗೋಣಿಕೊಪ್ಪ ಸೇವಾ ಕೇಂದ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಮಕ್ಕಳು ರಾಧಾಕೃಷ್ಣನ ವೇಷಧರಿಸಿ ಸಂಭ್ರಮಿಸಿದರು. ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಪ್ರವಚಕರಾಗಿ ಹಾಸನ ಸೇವಾ ಕೇಂದ್ರ ಸಂಚಾಲಕಿ ಬ್ರಹ್ಮಾಕುಮಾರಿ ಆಶಾ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚಾರಣೆ ಬಗ್ಗೆ ತಿಳಿಸಿಕೊಟ್ಟರು.

ಗೋಣಿಕೊಪ್ಪ ಸೇವಾ ಕೇಂದ್ರ ಸಂಚಾಲಕಿ ಬ್ರಹ್ಮಕುಮಾರಿ ರೇಖಾ, ಬ್ರಹ್ಮಾಕುಮಾರಿ ಕಾವ್ಯ, ಡಾಕ್ಟರ್ ಶಿವಪ್ಪ, ಬಬಿತ, ಬಿ.ಕೆ ರೇಷ್ಮಕ್ಕ ಇದ್ದರು. ರಾಧಾಕೃಷ್ಣ ವೇಷ ಧರಿಸಿದ ಎಲ್ಲಾ ಮಕ್ಕಳಿಗೆ ಉಡುಗೊರೆ ನೀಡಲಾಯಿತು.