x

ಪೊನ್ನಂಪೇಟೆ, ಸೆ. ೮: ಕನ್ನಡ ಸುವರ್ಣ ಸಂಭ್ರಮ ರಥಯಾತ್ರೆಯು ಪೊನ್ನಂಪೇಟೆಗೆ ಆಗಮಿಸಿತು. ಕರ್ನಾಟಕ ಸಂಭ್ರಮ-೫೦ ರ ಪ್ರಯುಕ್ತ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್ ಕುಮಾರ್ ಮತ್ತು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್ ರಥಯಾತ್ರೆಯನ್ನು ಬರಮಾಡಿಕೊಂಡರು.

ಕನ್ನಡಾAಬೆಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಮಡಿಕೇರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಂಜುನಾಥ್, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಚಂದ್ರಕುಮಾರ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲಿರ ರಶೀದ್, ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ಎ. ಪೂಣಚ್ಚ, ಪೊನ್ನಂಪೇಟೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಎಂ.ಕೆ. ದೀನಾ, ಇನ್ನಿತರರು ಉಪಸ್ಥಿತರಿದ್ದರು. ಮೆರವಣಿಗೆಯಲ್ಲಿ ಡೊಳ್ಳುಕುಣಿತ ಜನಾಕರ್ಷಿಸಿತು.