ಸೋಮವಾರಪೇಟೆ, ಸೆ. ೮: ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ತಾ. ೯ ರಂದು (ಇಂದು) ಪತ್ರಿಕಾಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ತಾಲೂಕು ನಿಯೋಜಿತ ಅಧ್ಯಕ್ಷ ಹೆಚ್.ಆರ್. ಹರೀಶ್‌ಕುಮಾರ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷ ಮಂಡಿಬೆಲೆ ರಾಜಣ್ಣ, ಪತ್ರಿಕಾಭವನದ ಟ್ರಸ್ಟ್ ಅಧ್ಯಕ್ಷ ಎಸ್. ಮಹೇಶ್ ಭಾಗವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಡಿ.ಪಿ. ಲೋಕೇಶ್ ತಿಳಿಸಿದ್ದಾರೆ.