ಮಡಿಕೇರಿ, ಸೆ. ೮: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಸಂಯೋಜಕಿ ಗಾಯತ್ರಿ ಹಾಗೂ ಅಧ್ಯಕ್ಷತೆ ವಹಿಸಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ಅವರುಗಳು ಹಾಕಿ ಮಾಂತ್ರಿಕ ಮೇ. ಧ್ಯಾನ್‌ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಇದೇ ಸಂದರ್ಭ ಕ್ರೀಡಾ ನಿಲಯದ ಕ್ರೀಡಾರ್ಥಿಗಳಿಗೆ ಹಾಕಿ ಸ್ಟಿಕ್‌ಗಳನ್ನು ವಿತರಣೆ ಮಾಡಲಾಯಿತು. ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಹಾಕಿ ತರಬೇತುದಾರರಾದ ಕೆ.ಕೆ. ಬಿಂದಿಯಾ ಹಾಜರಿದ್ದರು. ತರಬೇತುದಾರ ಅಂತೋಣಿ ಡಿಸೋಜ ನಿರೂಪಿಸಿ, ಅಥ್ಲೆಟಿಕ್ಸ್ ತರಬೇತುದಾರ ಮಹಾಬಲ ಸ್ವಾಗತಿಸಿದರು.