ಮಡಿಕೇರಿ ಸೆ. ೮: ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ತಾ.೯ ರಂದು ನಾಪೋಕ್ಲು ಮತ್ತು ತಾ. ೧೦ರಂದು ಚೇರಂಬಾಣೆಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮಾಹಿತಿ ನೀಡಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಾಪೋಕ್ಲು ಮತ್ತು ಚೇರಂಬಾಣೆಯಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.