ಮಡಿಕೇರಿ, ಸೆ. ೮: ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಗೋಣಿಕೊಪ್ಪಲು ಪ್ರೌಢಶಾಲೆ, ಸಂಯುಕ್ತ ಆಶ್ರಯದಲ್ಲಿ ಕಲಾವಿದ ದಿ. ವಿ.ಟಿ ಶ್ರೀನಿವಾಸ್ ನೆನಪು, ಗಾನ ಮತ್ತು ನುಡಿ ನಮನ ಕಾರ್ಯಕ್ರಮವು ಗೋಣಿಕೊಪ್ಪಲು ಪ್ರೌಢಶಾಲಾ ಸಭಾಂಗಣದಲ್ಲಿ ತಾ. ೧೧ ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ವಹಿಸಲಿದ್ದು, ಉದ್ಘಾಟನೆಯನ್ನು ಪೊನ್ನಂಪೇಟೆಯ ನಿನಾದ ಸಂಗೀತ ನೃತ್ಯಸಂಸ್ಥೆಯ ಅಧ್ಯಕ್ಷೆ ಚೇಂದಿರ ನಿರ್ಮಲ ಬೋಪಣ್ಣ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪತ್ರಕರ್ತ ಶ್ರೀಧರ ನೆಲ್ಲಿತ್ತಾಯ, ಆಕಾಶವಾಣಿ ಕಲಾವಿದರಾದ ಬಿ.ಎ ಗಣೇಶ್, ವೀರಾಜಪೇಟೆಯ ಸ್ವರಾರ್ಣವ ಸಂಗೀತ ಶಾಲೆಯ ವ್ಯವಸ್ಥಾಪಕ ವಿದ್ವಾನ್ ದಿಲಿ ಕುಮಾರ್, ಕಲಾವಿದರಾದ ಕೆ ಚಂದ್ರಶೇಖರ್, ತಬಲ ಕಲಾವಿದರಾದ ಮೂರ್ನಾಡಿನ ಚಂದ್ರು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ ಮತ್ತು ದಿ.ವಿ.ಟಿ ಶ್ರೀನಿವಾಸ್ ರವರ ಕುಟುಂಬಸ್ಥರು ಭಾಗವಹಿಸಲಿದ್ದಾರೆ. ದಿವಂಗತ ವಿ.ಟಿ ಶ್ರೀನಿವಾಸ್ ಸ್ನೇಹಿತರ ಬಳಗದಿಂದ ಗಾನನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.