ಶನಿವಾರಸAತೆ, ಸೆ. ೮: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ ಹಾಗೂ ಶನಿವಾರಸಂತೆ ನೂತನ ಬಸ್ ನಿಲ್ದಾಣದ ಶಿಲಾನ್ಯಾಸ ಸಮಾರಂಭ ತಾ. ೧೧ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ನಡೆಯಲಿದೆ.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಶಿಲಾನ್ಯಾಸ ನೆರವೇರಿಸುತ್ತಾರೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಉಪಸ್ಥಿತರಿರಲಿದ್ದು, ಅತಿಥಿಗಳಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ವಿಧಾನಸಭಾ ಕ್ಷೇತ್ರ ಶಾಸಕ ಎಸ್.ಆರ್. ಶ್ರೀನಿವಾಸ ಪಾಲ್ಗೊಳ್ಳುತ್ತಾರೆ.

ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಅಧ್ಯಕ್ಷತೆ ವಹಿಸುತ್ತಾರೆ. ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರುಗಳಾದ ಸುಜಾ ಕುಶಾಲಪ್ಪ, ಭೋಜೇಗೌಡ, ಧನಂಜಯ್ ಸರ್ಜಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್, ಸಾರಿಗೆ ಇಲಾಖೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ವಿ. ಪ್ರಸಾದ್, ಕ.ರಾ.ರ.ಸಾ.ನಿ.ದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ನಿರ್ದೇಶಕಿ ಡಾ. ನಂದಿನಿದೇವಿ, ಜಿಲ್ಲಾಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಉಪಸ್ಥಿತರಿರುತ್ತಾರೆ ಎಂದು ಕ.ರಾ.ರ.ಸಾ.ನಿ. ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ರಾಮಲಿಂಗಯ್ಯ ಬಿ.ಹೊಸ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.