ಮಡಿಕೇರಿ, ಸೆ. ೮: ಬೆಟ್ಟಗೇರಿ ಗ್ರಾಮ ಪಂಚಾಯಿತಿ ವಾರ್ಡ್ ಸಭೆಗಳು ತಾ. ೧೦ ಹಾಗೂ ೧೧ರಂದು ನಡೆಯಲಿವೆ.
ತಾ. ೧೦ರಂದು ಬೆಳಿಗ್ಗೆ ೧೦.೩೦ಕ್ಕೆ ಸದಸ್ಯ ದಿನೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಅರ್ವತ್ತೋಕ್ಲು ದವಸ ಭಂಡಾರದಲ್ಲಿ, ಮಧ್ಯಾಹ್ನ ೧೨ಕ್ಕೆ ಸದಸ್ಯೆ ಜಲಜಾಕ್ಷಿ ಅಧ್ಯಕ್ಷತೆಯಲ್ಲಿ ಅಪ್ಪಂಗಳ ಸಮುದಾಯ ಭವನದಲ್ಲಿ, ೩ ಗಂಟೆಗೆ ಸದಸ್ಯೆ ಎನ್.ಎ. ಗಂಗಮ್ಮ ಅಧ್ಯಕ್ಷತೆಯಲ್ಲಿ ಹೆರವನಾಡು ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಸಭೆ ನಡೆಯಲಿದೆ.
ತಾ. ೧೧ರಂದು ಜಯಂತಿ ಅಧ್ಯಕ್ಷತೆಯಲ್ಲಿ ಕಾರುಗುಂದ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ, ಬಿ.ಎ. ಗೋಪಾಲ ಅಧ್ಯಕ್ಷತೆಯಲ್ಲಿ ಬೆಟ್ಟಗೇರಿ ಸರಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಮಧ್ಯಾಹ್ನ ೩ ಗಂಟೆಗೆ ವಾರ್ಡ್ ಸಭೆ ನಡೆಯಲಿದೆ. ತಾ.೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಬೆಟ್ಟಗೇರಿ ಸರಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಅಧ್ಯಕ್ಷೆ ಚಳಿಯಂಡ ಕಮಲ ಉತ್ತಯ್ಯ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸಭೆ ನಿಗದಿಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.