ಮಡಿಕೇರಿ, ಸೆ. ೯: ಕುಟ್ಟ ನಿವಾಸಿ ರಾಘವನ್ ಅವರ ಮನೆಯವರಿಗೆ ತೀವ್ರ ಉಸಿರಾಟದ ತೊಂದರೆ ಇದ್ದು, ವೈದ್ಯರು ಆಕ್ಸಿಜನ್ ಕಾನ್ಸಂಟ್ರೇಟರ್ ಬಳಸುವಂತೆ ಸಲಹೆ ನೀಡಿದ್ದರು. ದುಬಾರಿ ಆಕ್ಸಿಜನ್ ಕಾನ್ಸಂಟ್ರೇಟರ್ ಅನ್ನು ಕೊಳ್ಳಲು ಅಶಕ್ತರಾಗಿದ್ದ ಇವರು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರಲ್ಲಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡರು.

ಇವರ ಕಷ್ಟವನ್ನು ಅರಿತ ಶಾಸಕರು ಕೂಡಲೇ, ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಅನುಕೂಲವಾಗಲೆಂದು ಆಕ್ಸಿಜನ್ ಕಾನ್ಸಂಟ್ರೇಟರ್ ಅನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಪ್ರಶಾಂತ್, ಕಲಿಯಂಡ ಸಂಪನ್ ಅಯ್ಯಪ್ಪ, ನಿಶ್ಚಲ ದಂಬೆಕೋಡಿ, ಕಾಳಿಮಾಡ ಪ್ರಶಾಂತ್, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.