ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮುಂದೂಡಿಕೆ

ಬೆAಗಳೂರು, ಸೆ. ೯: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ ೧೨ರಂದು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ. ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಇಂದು ಸಹ ಸುಧೀರ್ಘ ವಿಚಾರಣೆ ನಡೆಯಿತು. ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಪ್ರಾಸಿಕ್ಯೂಷನ್‌ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಹೇಳಿ ಲಲಿತಾ ಕುಮಾರಿ ಪ್ರಕರಣವನ್ನು ಉಲ್ಲೇಖಿಸಿದರು.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ನಾಲ್ವರ ವಿರುದ್ಧ ಚಾರ್ಜ್ಶೀಟ್

ಬೆಂಗಳೂರು, ಸೆ. ೧೦: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬAಧಿಸಿದAತೆ ರಾಷ್ಟಿçÃಯ ತನಿಖಾ ಸಂಸ್ಥೆ ನಾಲ್ವರು ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮಥೀನ್ ಅಹ್ಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಶರೀಫ್ ವಿರುದ್ಧ ಸೋಮವಾರ ಚಾರ್ಜ್ಶೀಟ್ ಸಲ್ಲಿಸಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಈ ವರ್ಷ ಮಾರ್ಚ್ ೧ ರಂದು ಸಂಭವಿಸಿದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು ಮತ್ತು ಹೋಟೆಲ್ ವ್ಯಾಪಕ ಹಾನಿಯಾಗಿತ್ತು. ಮಾ. ೩ ರಂದು ಪ್ರಕರಣದ ತನಿಖೆಯನ್ನು ಆರಂಭಿಸಿದ ಎನ್‌ಐಎ ವಿವಿಧ ರಾಜ್ಯಗಳ ಪೊಲೀಸ್ ಪಡೆಗಳು ಮತ್ತು ಇತರ ಏಜೆನ್ಸಿಗಳ ಸಹಕಾರದೊಂದಿಗೆ ನಾಲ್ವರನ್ನು ಬಂಧಿಸಿತ್ತು. ಇಂದು ಈ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತು. ೨೦೨೪ರ ಜ.೨೨ರಂದು ಅಯೋಧ್ಯೆಯಲ್ಲಿ ನಡೆದಿದ್ದ ಪ್ರಾಣಪ್ರತಿಷ್ಠಾಪನೆ ಸಮಾರಂಭ ದಿನದಂದು ಕರ್ನಾಟಕದ ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಪ್ಲಾö್ಯನ್ ವಿಫಲವಾದ ಹಿನ್ನೆಲೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಲು ಸಂಚು ಮಾಡಿದ್ದರು. ಅದರಂತೆ ಆರೋಪಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ್ದಾರೆ ಎಂದು ಎನ್‌ಐಎ ವಿಶೇಷ ಕೋರ್ಟ್ಗೆ ಸಲ್ಲಿಸಿರುವ ಚಾರ್ಜ್ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಕರ್ತವ್ಯಕ್ಕೆ ಹಾಜರಾಗುವಂತೆ ಕಿರಿಯ ವೈದ್ಯರಿಗೆ ಸುಪ್ರೀಂ ಸೂಚನೆ

ನವದೆಹಲಿ, ಸೆ. ೯: ಕೋಲ್ಕತ್ತಾದ ಆರ್.ಜಿ. ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಂಜೆ ೫ ಗಂಟೆಯೊಳಗೆ ತಮ್ಮ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ನೀಡಿದೆ. ವೈದ್ಯರು ಆದೇಶ ಪಾಲಿಸದಿದ್ದರೆ ರಾಜ್ಯ ಸರ್ಕಾರ ಅವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು ಎಂದು ಕೂಡ ನ್ಯಾಯಾಲಯ ಎಚ್ಚರಿಕೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ, ಕಿರಿಯ ವೈದ್ಯರು ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಕುಂದು ಕೊರತೆಗಳನ್ನು ಪರಿಗಣಿಸಿ ಆದೇಶ ಹೊರಡಿಸಿದೆ.

ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕಾರ

ನವದೆಹಲಿ, ಸೆ. ೯: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರ ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತೀಯ ರೈಲ್ವೆ ಸೋಮವಾರ ಅಂಗೀಕರಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಂದು ಹೊರಡಿಸಿದ ಪ್ರತ್ಯೇಕ ನೋಟೀಸ್‌ನಲ್ಲಿ, ಸೆಪ್ಟೆಂಬರ್ ೬ ರಂದು ಸಲ್ಲಿಸಲಾದ ಕುಸ್ತಿಪಟುಗಳ ರಾಜೀನಾಮೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಕ್ಷಮ ಪ್ರಾಧಿಕಾರವು ಅಂಗೀಕರಿಸಿದೆ ಎಂದು ಉತ್ತರ ರೈಲ್ವೆ ಹೇಳಿದೆ. ಪುನಿಯಾ ಮತ್ತು ಫೋಗಟ್ ಇಬ್ಬರೂ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದಾರೆ. ಫೋಗಟ್‌ಗೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ನೀಡಲಾಗಿದೆ. ಚುನಾವಣಾ ನಿಯಮಗಳ ಪ್ರಕಾರ, ಅಕ್ಟೋಬರ್ ೫ ರ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯಲು ಅವರು ರೈಲ್ವೆಯಿಂದ ಅಧಿಕೃತವಾಗಿ ಬಿಡುಗಡೆ ಪಡೆಯಬೇಕಾಗಿತ್ತು. ಇದೀಗ, ರೈಲ್ವೆಯು ಇಬ್ಬರು ಒಲಿಂಪಿಯನ್‌ಗಳನ್ನು ಅವರ ಸೇವೆಯಿಂದ ಬಿಡುಗಡೆ ಮಾಡಿರುವುದರಿಂದ, ಫೋಗಟ್ ಚುನಾವಣೆಯಲ್ಲಿ ಸ್ಪರ್ಧಿಸಬಹುದು.

ಉತ್ಸವ ವೇಳೆ ಗುಂಪು ಘರ್ಷಣೆ - ೩೪ ಮಂದಿಯ ಬಂಧನ

ಸೂರತ್, ಸೆ. ೯: ನಗರದಲ್ಲಿನ ಗಣೇಶ ಪೆಂಡಾಲ್‌ವೊAದಕ್ಕೆ ಭಾನುವಾರ ತಡರಾತ್ರಿ ಕಿಡಿಗೇಡಿಗಳು ಕಲ್ಲು ತೂರಿದ್ದರಿಂದ ಮೂರ್ತಿಗೆ ಹಾನಿಯಾಗಿದೆ. ಸೈಯದ್‌ಪುರ ಪ್ರದೇಶದಲ್ಲಿ ನಡೆದ ಘಟನೆಗೆ ಸಂಬAಧಿಸಿದAತೆ ಕಾನೂನಿನ ಸಂಘರ್ಷಕ್ಕೆ ಒಳಗಾದ ಕೆಲವು ಬಾಲಕರನ್ನು ಪೊಲೀಸರು ಬಂಧಿಸಿದ ನಂತರ, ಸುಮಾರು ೩೦೦ ಜನರ ಗುಂಪು ತಮ್ಮ ಸಮುದಾಯದ ಸದಸ್ಯರ ವಿರುದ್ಧದ ಕ್ರಮವನ್ನು ಪ್ರತಿಭಟಿಸಲು ಲಾಲ್‌ಗೇಟ್ ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿತು. ಈ ಸಂದರ್ಭ ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಗಾಯಗೊಂಡಿದ್ದಾರೆ. ವಾಹನಕ್ಕೆ ಹಾನಿಯಾಗಿದೆ ಎಂದು ಸೂರತ್ ಪೊಲೀಸ್ ಆಯುಕ್ತ ಅನುಪಮ್ ಸಿಂಗ್ ಗೆಹಲೋತ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಬೀಸಿ, ಅಶ್ರುವಾಯು ಪ್ರಯೋಗಿಸಿದರು. ಪ್ರಕರಣಕ್ಕೆ ಸಂಬAಧಿಸಿದAತೆ ೩೪ ಜನರನ್ನು ಬಂಧಿಸಲಾಗಿದ್ದು, ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ನಟ ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು, ಸೆ. ೯: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. ನಟ ದರ್ಶನ್ ಸೇರಿ ಎಲ್ಲಾ ೧೭ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಸೆ.೧೨ರ ವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಇನ್ನು ಇಂದಿನ ವಿಚಾರಣೆಗೆ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ಅದೇ ರೀತಿ ಈ ಪ್ರಕರಣದಲ್ಲಿ ಬೇರೆ ಬೇರೆ ಜೈಲು ಸೇರಿರುವ ಎಲ್ಲರೂ ವಿಚಾರಣೆ ಎದುರಿಸಿದರು. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಸೆಪ್ಟೆಂಬರ್ ೧೨ರಂದು ಇವರು ಮತ್ತೆ ಕೋರ್ಟ್ ಎದುರು ಹಾಜರಾಗಬೇಕಾಗಿದೆ.

ಚೀನಾ-ರಷ್ಯಾ ಸೇನಾ ಜಂಟಿ ಸಮರಾಭ್ಯಾಸ ಘೋಷಣೆ

ಬೀಜಿಂಗ್, ಸೆ. ೯: ರಷ್ಯಾದೊಂದಿಗೆ ನೌಕಾ ಮತ್ತು ವಾಯು ಸಮರಾಭ್ಯಾಸ ಆರಂಭಿಸುವುದಾಗಿ ಚೀನಾದ ರಕ್ಷಣಾ ಸಚಿವಾಲಯವು ಸೋಮವಾರ ಘೋಷಿಸಿದೆ. ಉತ್ತರ ಯುನೈಟೆಡ್-೨೦೨೪ ಸಮರಾಭ್ಯಾಸವು ಜಪಾನ್‌ನ ಸಮುದ್ರ ಮತ್ತು ಉತ್ತರದ ಒಖಾಟ್‌ಸ್ಕ್ ಸಮುದ್ರದಲ್ಲಿ ನಡೆಯಲಿದೆ ಎಂದು ಸಚಿವಾಲಯ ತಿಳಿಸಿದೆ. ನೌಕಾ ಮತ್ತು ವಾಯು ಸಮರಾಭ್ಯಾಸವು ಎರಡು ದೇಶಗಳ ನಡುವಿನ ಕಾರ್ಯತಂತ್ರದ ಸಹಕಾರವನ್ನು ಸುಧಾರಿಸಲು ಮತ್ತು ಭದ್ರತಾ ಬೆದರಿಕೆಗಳನ್ನು ಒಟ್ಟಿಗೆ ಎದುರಿಸಲು ಸಹಕಾರಿಯಾಗಲಿದೆ' ಎಂದು ಹೇಳಿದೆ.