ಕೂಡಿಗೆಯ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಹಾಗೂ ಶ್ರೀ ದಂಡಿನಮ್ಮ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿ ಮತ್ತು ಯಂಗ್ ಸ್ಟಾರ್ ಅಸೋಸಿಯೇಷನ್ ವತಿಯಿಂದ ೧೬ನೇ ವರ್ಷದ ಗೌರಿ - ಗಣೇಶ ಮೂರ್ತಿಗಳನ್ನು ಕೂಡಿಗೆ ಸರ್ಕಲ್ ಸಮೀಪದಲ್ಲಿರುವ ಗಣಪತಿ ಪೆಂಡಲ್ನ ಸಭಾಂಗಣದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.ಕುಂಬೂರು ಗೌರಿ - ಗಣೇಶ ಸೇವಾ ಸಮಿತಿ ಆಶ್ರಯದಲ್ಲಿ ಗೌರಿ - ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಉತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿತ್ತು.ಶನಿವಾರಸಂತೆ ಪಟ್ಟಣದ ಬ್ರೆöÊಟ್ ಅಕಾಡೆಮಿ ಆಂಗ್ಲ ಮಾಧÀ್ಯಮ ಶಾಲೆಯ ವಿದ್ಯಾರ್ಥಿಗಳು ಗಣೇಶ ಚತುರ್ಥಿ ಪ್ರಯುಕ್ತ ಪರಿಸರ ಸ್ನೇಹಿ ಗಣೇಶನ ಮೂರ್ತಿ ತಯಾರಿಸಿ, ಅದನ್ನು ಹೂವುಗಳಿಂದ ಅಲಂಕರಿಸಿ ಪೂಜಿಸಿ ಸಂಭ್ರಮಿಸಿದರು.ಚೆಯ್ಯAಡಾಣೆ ಗಣೇಶ ಸೇವಾ ಸಮಿತಿಯ ವತಿಯಿಂದ ಶ್ರೀಲಕ್ಷ್ಮಿ ಮಹಿಳಾ ಸಮಾಜದಲ್ಲಿ ಗೌರಿ -ಗಣಪತಿ ಮೂರ್ತಿಗಳ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಭಕ್ತಾದಿಗಳಿಗೆ ಅನ್ನದಾನ ಆಯೋಜಿಸಲಾಗಿತ್ತು. ಬಳಿಕ ಮಹಾಗಣಪತಿ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಚೆಯ್ಯಂಡಾಣೆಯ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಕರಡ ಹೊಳೆಯಲ್ಲಿ ವಿಸರ್ಜಿಸಲಾಯಿತು.ಕರಿಕೆ ಸಮೀಪದ ಎಳ್ಳುಕೊಚ್ಚಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶೋತ್ಸವ ಆಚರಿಸಲಾಯಿತು. ಅಲ್ಲಿನ ವಿಎಸ್.ಎಸ್.ಎನ್ ಕಟ್ಟಡದ ಮುಂಭಾಗದ ಬೇಕಲ್ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ, ಭಜನೆ ಬಳಿಕ ಮೆರವಣಿಗೆಯಲ್ಲಿ ತೆರಳಿ ಸಮೀಪದ ನದಿಯಲ್ಲಿ ವಿಸರ್ಜಿಸಲಾಯಿತು. ಸ್ಥಳೀಯ ಕಲಾವಿದ ಸನತ್ ತಯಾರಿಸಿದ ಗಣೇಶನ ವಿಗ್ರಹ ಗಮನ ಸೆಳೆಯಿತು.ಮುಳ್ಳೂರು ಸಮೀಪದ ಕಣಿವೆಬಸವನಹಳ್ಳಿ ಗ್ರಾಮದ ಗೌರಿ ಗಣೇಶ ಸೇವಾ ಸಮಿತಿ ಮತ್ತು ಗ್ರಾಮಸ್ಥರ ಸಹಭಾಗಿತ್ವದಲ್ಲಿ ಗ್ರಾಮದ ಸಾರ್ವಜನಿಕ ಸಮುದಾಯ ಭವನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಗಂಗಾಪೂಜೆ ಬಳಿಕ ಗಣೇಶ ಮೂರ್ತಿಯನ್ನು ಮೆರವಣಿಗೆ ಮೂಲಕ ತಂದು ಪ್ರತಿಷ್ಠಾಪಿಸಲಾಯಿತು. ಈ ಸಂದರ್ಭ ಗ್ರಾಮಸ್ಥರಿಗೆ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು.ನಾಪೋಕ್ಲುವಿನ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ೪ ಗಣೇಶ ಸೇವಾ ಸಮಿತಿಗಳ ವತಿಯಿಂದ ಸಂತೆ ಮೈದಾನದಿಂದ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿರಿಸಿ ವಾದ್ಯದೊಂದಿಗೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ತೆರಳಿ ವಿವಿಧ ದೇವಾಲಯಗಳಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.
ಗಣೇಶೋತ್ಸವ ಸಮಿತಿಯ ಪ್ರಮುಖ ಕಲಿಯಂಡ ವಿಠಲ ಈಡುಗಾಯಿ ಒಡೆಯುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಬುಧವಾರ ಎಲ್ಲಾ ಗಣೇಶೋತ್ಸವ ಸಮಿತಿಗಳಿಂದ ಪ್ರತಿಷ್ಠಾಪನೆಗೊಂಡ ಗೌರಿ ಗಣೇಶ ಮೂರ್ತಿಗಳನ್ನು ಕಾವೇರಿ ನದಿಯಲ್ಲಿ ವಿಸರ್ಜಿಸಲಾಗುತ್ತದೆ.
ಇಂದಿರಾ ನಗರದಲ್ಲಿ ಇಂದಿರಾ ನಗರದ ವಿವೇಕಾನಂದ ಸಂಘದ ಗಣೇಶ ಉತ್ಸವ ಸೇವಾ ಸಮಿತಿ, ಗುರುಪೊನ್ನಪ್ಪ ಸಭಾಂಗಣದಲ್ಲಿ ಶ್ರೀರಾಮ ಟ್ರಸ್ಟ್ ಗಣೇಶೋತ್ಸವ ಸಮಿತಿ, ಶ್ರೀ ಪೊನ್ನು ಮುತ್ತಪ್ಪ ದೇವಾಲಯದಲ್ಲಿ ಶ್ರೀ ಪೊನ್ನು ಮುತ್ತಪ್ಪ ವಿನಾಯಕ ಸೇವಾ ಸಮಿತಿ, ಹಳೆ ತಾಲೂಕಿನ ಶ್ರೀ ಭಗವತಿ ದೇವಾಲಯದಲ್ಲಿ ನಾಪೋಕ್ಲು ನಾಡು ಗೌರಿ ಗಣೇಶ ಸಮಿತಿ, ವೆಂಕಟೇಶ್ವರ ದೇವಾಲಯದಲ್ಲಿ ಕಕ್ಕುಂದ ಕಾಡಿನ ಗಣೇಶೋತ್ಸವ ಸೇವಾ ಸಮಿತಿಗಳು ಗೌರಿ - ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿವೆ.ನೆಲ್ಲಿಹುದಿಕೇರಿ ಗ್ರಾಮದ ಶಾಲೆ ರಸ್ತೆಯಲ್ಲಿರುವ ಶ್ರೀ ಸಿದ್ಧಿವಿನಾಯಕ ಮಿತ್ರ ಮಂಡಳಿ ವತಿಯಿಂದ ಗೌರಿ ಗಣೇಶ ವಿಗ್ರಹಗಳನ್ನು ಮೆರವಣಿಗೆ ಮೂಲಕ ತಂದು ಪ್ರತಿಷ್ಠಾಪನೆ ಮಾಡಲಾಯಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು..ಸಂಪಾಜೆ ಶ್ರೀ ಪಂಚಲಿAಗೇಶ್ವರ ದೇವಸ್ಥಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ನಡೆಯಿತು. ಶ್ರೀ ಪಂಚಲಿAಗೇಶ್ವರ ದೇವರಿಗೆ ಪೂಜಾ ವಿಧಿ ವಿಧಾನಗಳು ನೆರವೇರಿದವು.ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ಸ್ಥಳಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಕೂಡಿಗೆ ಸರ್ಕಲ್, ಅಂಬೇಡ್ಕರ್ ಕಾಲೋನಿ, ಕೂಡುಮಂಗಳೂರು ಗ್ರಾಮದ ಬಸವೇಶ್ವರ ದೇವಾಲಯ, ಸುಂದರನಗರ ಸೇರಿದಂತೆ ಅನೇಕ ಗ್ರಾಮಗಳಿಗೆ ಶಾಸಕರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ಪಿ.ಹಮೀದ್, ಅರುಣ್ ರಾವ್ ಅನಂತ, ಶಿವಕುಮಾರ್, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಅಣ್ಣಯ್ಯ, ಯಂಗ್ ಸ್ಟಾರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಎಸ್. ರಕ್ಷಿತ್ ಕುಮಾರ್, ಕಾರ್ಯದರ್ಶಿ ಡಿ. ಉಮೇಶ್, ಗೌರವ ಅಧ್ಯಕ್ಷ ಪ್ರಮೀಣ್ ಸೇರಿದಂತೆ ಸಮಿತಿಯ ನಿರ್ದೇಶಕರು, ಕಾಂಗ್ರೆಸ್ನ ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು.