ಕೂಡಿಗೆ, ಸೆ. ೯: ತರಗತಿಯಲ್ಲಿ ಪಾಠ ಮಾಡುವುದಕ್ಕಿಂತ, ಪ್ರಾಯೋಗಿಕವಾಗಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಕೃಷಿ ಪಾಠದ ಬಗ್ಗೆ ಸಂಪೂರ್ಣ ಮಾಹಿತಿ ಮನದಟ್ಟು ಮಾಡಲು ಸಾಧ್ಯ ಎಂಬ ಆಶಯ ದೊಂದಿಗೆ ಕೂಡುಮಂಗಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಭತ್ತದ ನಾಟಿ ಮಾಡಿಸುವ ಮೂಲಕ ಕೃಷಿ ಶಿಕ್ಷಣವನ್ನು ನೀಡಲಾಯಿತು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ರಾಷ್ಟಿçÃಯ ಸೇವಾ ಯೋಜನೆ (ಎನ್.ಎಸ್.ಎಸ್.) ವತಿಯಿಂದ ಎಸ್ ಡಿ ಎಂ ಸಿ. ವಿದ್ಯಾರ್ಥಿ ಸಂಘ ಹಾಗೂ ಕೂಡ್ಲೂರು ಗ್ರಾಮದ ಬಸವೇಶ್ವರ ದೇವಸ್ಥಾನ ಸಮಿತಿ ಸಂಯುಕ್ತಾಶ್ರಯದಲ್ಲಿ ಕೂಡ್ಲೂರು ಗ್ರಾಮದ ಪ್ರಗತಿಪರ ರೈತ ಕೆ.ಎಸ್.ರಾಜಾಚಾರಿ ಅವರ ಭತ್ತದ ಗದ್ದೆಯಲ್ಲಿ ಶಾಲಾ ಮಕ್ಕಳು ಕೃಷಿಕರೊಂದಿಗೆ ಸೇರಿ ಗದ್ದೆ ನಾಟಿ ಮಾಡುವ ಮೂಲಕ ಗಮನ ಸೆಳೆದರು.
ಪ್ರಗತಿಪರ ಕೃಷಿಕ ಎಂ.ಎನ್. ಕಾಳಪ್ಪ ಅವರ ಮಾರ್ಗದರ್ಶನದಲ್ಲಿ ಜನಪದ ಹಾಡುಗಳನ್ನು ಹೇಳುತ್ತಾ ಸಂಭ್ರಮ- ಸಡಗರದಿಂದ ಗದ್ದೆ ನಾಟಿ ಮಾಡಿದರು.
ನಾಟಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಕೆಸರು ಗದ್ದೆ ಕ್ರೀಡೆ ಮತ್ತು ಗದ್ದೆ ನಾಟಿ ಕಾರ್ಯ, ರೈತರ ಜೀವನ ಕ್ರಮ ಹಾಗೂ ಕೃಷಿಯ ಮಹತ್ವದ ಕುರಿತು ಮಾಹಿತಿ ನೀಡಿದರು.
(ಮೊದಲ ಪುಟದಿಂದ) ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸದಸ್ಯರೂ ಆದ ಪ್ರಗತಿಪರ ಕೃಷಿಕ ಎಂ.ಎನ್.ಕಾಳಪ್ಪ ಮಾತನಾಡಿ, ಶಾಲಾ ಮಕ್ಕಳಿಗೆ ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು ರೈತರ ಕೃಷಿ ಜೀವನ ಕ್ರಮದ ಬಗ್ಗೆ ಹೆಚ್ಚಿನ ಅರಿವು ಹೊಂದುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಕೂಡ್ಲೂರು ಗ್ರಾಮದ ಪ್ರಗತಿಪರ ರೈತ ಕೆ.ಎಸ್. ರಾಜಾಚಾರಿ ಮಾತನಾಡಿ, ಇದರಿಂದ ವಿದ್ಯಾರ್ಥಿಗಳಿಗೆ ಕೃಷಿ ಪರಿಚಯ ಮಾಡಿಕೊಡಲು ಸಹಕಾರಿಯಾಗಿವೆ ಎಂದರು.
ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ ಮಾತನಾಡಿ, ಗದ್ದೆಯಲ್ಲಿ ಮಕ್ಕಳು ಸಂಭ್ರಮದಿAದ ಪಾಲ್ಗೊಂಡು ಕೃಷಿಯ ಅನುಭವ ಪಡೆಯುತ್ತಿರುವುದು ಭವಿಷ್ಯದಲ್ಲಿ ಮಕ್ಕಳು ಕೃಷಿ ಕಾರ್ಯದಲ್ಲಿ ತೊಡಗಲು ಪ್ರೇರೇಪಣೆ ನೀಡಲಿದೆ ಎಂದರು.
ಗದ್ದೆನಾಟಿ ಕಾರ್ಯದಲ್ಲಿ ಮಕ್ಕಳೊಂದಿಗೆ ಎಸ್ ಡಿ ಎಂ ಸಿ ಸದಸ್ಯೆ ಶೃತಿ, ಪ್ರಕೃತಿ, ಕೃಷಿಕರಾದ ಕೆ.ಆರ್.ನಾಗರಾಜ್, ಸಾವಿತ್ರಮ್ಮ, ರಜನಿ, ಪ್ರಕಾಶ್, ಭಾಗ್ಯ ಸೇರಿದಂತೆ ಕೃಷಿಕರು ಮತ್ತು ಗ್ರಾಮಸ್ಥರು ಇದ್ದರು.