ಸೋಮವಾರಪೇಟೆ, ಸೆ. ೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಾಂತಳ್ಳಿ ಕಾರ್ಯಕ್ಷೇತ್ರದ ಶ್ರೀ ಕುಮಾರಲಿಂಗೇಶ್ವರ ದೇವಸ್ಥಾನದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ದೇವಸ್ಥಾನದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಅವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಂತಳ್ಳಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಕುಮಾರ್ ಪ್ರಗತಿ ಬಂದು ಮತ್ತು ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರಿಗೆ ಹಣ್ಣಿನ ಸಸಿಗಳನ್ನು ವಿತರಣೆ ಮಾಡಿದರು. ಕಾರ್ಯಕ್ರಮ ದಲ್ಲಿ ಕುಮಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ.ಎಂ. ಲೋಕೇಶ್, ಕಾರ್ಯದರ್ಶಿ ಕೆ.ಕೆ. ಮುತ್ತಣ್ಣ, ಶಾಂತಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಪಿ. ಚಂಗಪ್ಪ, ಒಕ್ಕೂಟದ ಉಪಾಧ್ಯಕ್ಷ ದಿವ್ಯಕುಮಾರ್, ಮೇಲ್ವಿಚಾರಕ ಲಕ್ಷö್ಮಣ್, ಕೃಷಿ ಮೇಲ್ವಿಚಾರಕ ರಾಜಣ್ಣ, ಸೇವಾ ಪ್ರತಿನಿಧಿ ಶುಭಾವತಿ ಹಾಗೂ ಪ್ರಗತಿ ಬಂದು ಮತ್ತು ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.