ಸೋಮವಾರಪೇಟೆ, ಸೆ.೯: ಶಾಲಾ ಶಿಕ್ಷಣ ಇಲಾಖೆ, ಜಿ.ಪಂ., ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಾದಾಪುರ ಸರ್ಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ತಾ. ೧೧ ರಂದು (ನಾಳೆ) ಮಾದಾಪುರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸೋಮವಾರಪೇಟೆ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಮುಖ್ಯ ಶಿಕ್ಷಕ ಪಾಲಾಕ್ಷ ತಿಳಿಸಿದ್ದಾರೆ.
ಬೆಳಿಗ್ಗೆ ೧೦ ಗಂಟೆಗೆ ಕ್ರೀಡಾಕೂಟವನ್ನು ಶಾಸಕ ಮಂತರ್ ಗೌಡ ಉದ್ಘಾಟಿಸಲಿದ್ದು, ಗ್ರಾ.ಪಂ. ಅಧ್ಯಕ್ಷ ಮೋರ್ಕಂಡ ಬಿದ್ದಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಅಪ್ಪಚ್ಚು ರಂಜನ್, ಎಂ.ಎಲ್.ಸಿ. ಸುಜಾ ಕುಶಾಲಪ್ಪ, ಮಾದಾಪುರ ವಿಎಸ್ಎಸ್ಎನ್ ಅಧ್ಯಕ್ಷ ನಾಪಂಡ ಉಮೇಶ್, ಜಿ.ಪಂ. ಮಾಜಿ ಸದಸ್ಯ ಸಂದೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ತಾ. ೧೨ರಂದು ಸಂಜೆ ೪.೩೦ಕ್ಕೆ ಕ್ರೀಡಾಕೂಟದ ಸಮಾರೋಪ ನಡೆಯಲಿದ್ದು, ಗ್ರಾ.ಪಂ. ಉಪಾಧ್ಯಕ್ಷ ಸುರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾ.ಪಂ. ಸದಸ್ಯರುಗಳಾದ ಎಸ್.ಪಿ. ಗೋಪಿ, ಜರ್ಮಿ, ದಮಯಂತಿ, ಭಾರತಿ, ಪಳಂಗಪ್ಪ, ಜ್ಯೋತಿ, ಸೋಮಣ್ಣ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.