ಪೊನ್ನAಪೇಟೆ, ಸೆ. ೯: ಪೊನ್ನಂಪೇಟೆ ಗ್ರಾ.ಪಂ.ಯಲ್ಲಿ ಕಳೆದ ಏಳು ವರ್ಷಗಳಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ)ಯಾಗಿ ಕಾರ್ಯನಿರ್ವಹಿಸಿ ವರ್ಗಾವಣೆ ಗೊಂಡ ಪುಟ್ಟರಾಜು ಹಾಗೂ ದ್ವಿತೀಯ ದರ್ಜೆ ಸಹಾಯಕ ಸುರೇಶ್ ಅವರುಗಳನ್ನು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಬೀಳ್ಕೊಡಲಾಯಿತು.
ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಿರ ಹರೀಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಡಿಓ ಪುಟ್ಟರಾಜು ದಂಪತಿ ಮತ್ತು ಸುರೇಶ್ ಅವರನ್ನು ಸನ್ಮಾನಿಸಲಾಯಿತು.
ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲೀರ ಎಂ. ರಶೀದ್, ಹಿಂದಿನ ಪೊನ್ನಂಪೇಟೆ ಗ್ರಾಪಂ. ಮಾಜಿ ಅಧ್ಯಕ್ಷೆ ಸುಮಿತಾ, ಗಿರಿಜಾ, ಮಾಜಿ ಉಪಾಧ್ಯಕ್ಷೆ ದಶಮಿ ಸೇರಿದಂತೆ ಹಾಲಿ ಪಟ್ಟಣ ಪಂಚಾಯಿತಿಯ ಎಲ್ಲಾ ಸದಸ್ಯರು ಪಾಲ್ಗೊಂಡಿದ್ದರು.