ಮಡಿಕೇರಿ, ಸೆ. ೯: ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಅರ್ಹ ಕಾನೂನು ಪದವೀಧರರಿಗೆ ೨೦೨೩-೨೪ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕಾನೂನು ತರಬೇತಿ ಪಡೆಯಲು ಇರಬೇಕಾದ ಅರ್ಹತೆ ಮತ್ತು ನಿಬಂಧನೆಗಳು

ಅಭ್ಯರ್ಥಿಗಳು ಪ್ರ.ವರ್ಗ-೧ ಮತ್ತು ಪ್ರ.ವರ್ಗ-೨ಎ, ೩ಎ, ೩ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರ.ವರ್ಗ-೧ ರ ಅಭ್ಯರ್ಥಿಗಳಿಗೆ ರೂ. ೩.೫೦ ಲಕ್ಷ ಹಾಗೂ ಪ್ರ.ವರ್ಗ-೨ಎ, ೩ಎ, ೩ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ. ೨.೫೦ ಲಕ್ಷ ಒಳಪಟ್ಟಿರಬೇಕು. ಪ್ರ.ವರ್ಗ-೧ ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರ.ವರ್ಗ-೧ ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದ ೦೨ ವರ್ಷದ ಒಳಗಿರಬೇಕು.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರ.ವರ್ಗ-೧ರ ಅಭ್ಯರ್ಥಿಗಳಿಗೆ ೩೧ ಮತ್ತು ಪ್ರ.ವರ್ಗ-೨ಎ, ೩ಎ, ೩ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ೩೦ ವರ್ಷದ ಒಳಗಿರಬೇಕು. ಅಭ್ಯರ್ಥಿಯು ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿ ಸಲ್ಪಟ್ಟಿರಬೇಕು. ಕಾನೂನು ತರಬೇತಿಯು ೪ ವರ್ಷಗಳ ಅವಧಿಯಾಗಿದ್ದು, ಮಾಸಿಕ ರೂ. ೪ ಸಾವಿರದಂತೆ ಶಿಷ್ಯವೇತನ ನೀಡಲಾಗುವುದು. ಕಾನೂನು ತರಬೇತಿಯನ್ನು ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ೧೦ ಅಭ್ಯರ್ಥಿಗಳಿಗೆ ನೀಡಲು ಅವಕಾಶವಿದೆ. ಆಯ್ಕೆಯಾದ ಅಭ್ಯರ್ಥಿಯು ವಕೀಲ ತರಬೇತಿಯನ್ನು ಅರ್ಧಕ್ಕೆ ನಿಲ್ಲಿಸಿದಲ್ಲಿ, ತರಬೇತಿ ವೆಚ್ಚಕ್ಕೆ ಶೇ. ೧೦ ಬಡ್ಡಿಯನ್ನು ಸೇರಿಸಿ ಸರ್ಕಾರಕ್ಕೆ ಪಾವತಿ ಮಾಡುತ್ತೇನೆಂದು ರೂ. ೧೦೦ ರ ಛಾಪಾ ಕಾಗದದಲ್ಲಿ ಬರೆದುಕೊಡತಕ್ಕದ್ದು.

ಅರ್ಜಿ ನಮೂನೆಯನ್ನು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಈ ಕಚೇರಿಯಿಂದ ಪಡೆಯಲು ತಾ.೧೦ ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂ.೦೮೨೭೨-೨೯೫೬೨೮ ಮತ್ತು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌAಡ್ ಹತ್ತಿರ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ್ ಎನ್. ಕೋರಿದ್ದಾರೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ೨೦೨೪-೨೫ನೇ ಸಾಲಿನಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸ ಲಾಗುತ್ತಿದ್ದು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‌ಗಳ ಸಹಯೋಗ ದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗಯೋಜನೆ ಈ ಯೋಜನೆಯಡಿ ವಾರ್ಷಿಕ ವರಮಾನವು ರೂ. ೮ ಲಕ್ಷಗಳ ಮಿತಿಯಲ್ಲಿ ಇರಬೇಕು. ಗಂಗಾ ಕಲ್ಯಾಣ ನೀರಾವರಿ ಯೋಜನೆ ಈ ಯೋಜನೆ ಯಲ್ಲಿ ಕನಿಷ್ಟ ೧ ಎಕರೆ ಜಮೀನು ಹೊಂದಿರಬೇಕು ಹಾಗೂ ಸಣ್ಣ ಅಥವಾ ಅತೀ ಸಣ್ಣ ರೈತರಾಗಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಅರ್ಜಿ ಸಲ್ಲಿಸಲು ತಾ. ೧೬ ಕೊನೆಯ ದಿನವಾಗಿದೆ. (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ಉಪ್ಪಾರ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ ವಾಗಿರುತ್ತದೆ. ವಯೋಮಿತಿ ೧೮ ವರ್ಷ ಗಳಿಂದ ೫೫ ವರ್ಷಗಳ ಮಿತಿಯಲ್ಲಿರ ಬೇಕು. ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆ ಯಡಿ ಅಭ್ಯರ್ಥಿಯ ವಯೋಮಿತಿ ೧೮ ವರ್ಷಗಳಿಂದ ೩೦ ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರೂ.೩.೫೦ ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ ೨೧ ವರ್ಷಗಳಿಂದ ೪೫ ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. ೯೮ ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಮಿತಿಯೊಳ ಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.೩೩, ವಿಕಲ ಚೇತನರಿಗೆ ಶೇ. ೫, ತೃತೀಯ ಲಿಂಗಿಗಳಿಗೆ ಶೇ. ೧ ಮೀಸಲಾತಿ ಇರಿಸಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಗಳು). ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‌ಸೈಟ್ hಣಣಠಿ://uಠಿಠಿಚಿಡಿಚಿಜeveಟoಠಿmeಟಿಣ. ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ:೦೮೦-೨೨೨೫೨೫೫೫ ಯಿಂದ ಪಡೆಯಬಹುದಾಗಿದೆ.

ಮಡಿಕೇರಿ : ಪ್ರಸಕ್ತ (೨೦೨೪-೨೫) ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿ ಗಳಿಗೆ ಐ.ಎ.ಎಸ್, ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ೨೦೨೪-೨೫ನೇ ಸಾಲಿಗೆ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ (hಣಣಠಿs://sevಚಿsiಟಿಜhu. ಞಚಿಡಿಟಿಚಿಣಚಿಞಚಿ.gov.iಟಿ) ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ.

ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರ‍್ರಿಶ್ಚಿಯನ್, ಬೌದ್ಧ, ಜೈನ್, ಪಾರ್ಸಿ, ಸಿಖ್). ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ ೨೧ ರಿಂದ ೩೫ ವರ್ಷಗಳು ಮೀರಿರಬಾರದು. (ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ). ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ತಾ. ೧೦ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೫೫೨೮/೨೨೦೨೧೪ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಕೀಲ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ೨೦೨೪-೨೫ ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ. ೫ ಸಾವಿರಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. ೧೫ ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿ ಪಡೆಯಬಯಸುವ ಅಭ್ಯರ್ಥಿಗಳು ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೫೫೨೮/೨೨೦೨೧೪ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಹಾಗೂ ಇಲಾಖಾ ವೆಬ್‌ಸೈಟ್ ತಿತಿತಿ.ಜom.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗಪಡಿಸಿ ಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ.