ಮಡಿಕೇರಿ, ಸೆ. ೧೧: ನಗರಸಭೆ ಕಚೇರಿ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ದಿ ಅರ್ಬನ್ ಇಂಟರ್ನ್ಶಿಪ್ ಲರ್ನಿಂಗ್ ಪ್ರೋಗ್ರಾಮ್ (ಟಿಯುಎಲ್ಐಪಿ) ಕಾರ್ಯಕ್ರಮದಡಿ ನಗರಸಭೆ ವತಿಯಿಂದ ಡೇ-ನಲ್ಮ್ ಅಭಿಯಾನ ಮತ್ತು ಪಿಎಂ ಸ್ವನಿಧಿ ಯೋಜನೆಯಡಿ ೮ ರಿಂದ ೧೨ ವಾರಗಳ ಅವಧಿಯ ಇಂಟರ್ನಶಿಪ್ ತರಬೇತಿಗಾಗಿ ಪದವಿ ಸ್ನಾತಕೋತ್ತರ ಪದವಿ, ಡಿಪ್ಲೋಮ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಗರ ಕಲಿಕ ಪ್ರಾಯೋಗಿಕ ತರಬೇತಿ ಕಾರ್ಯಕ್ರಮ ೨೦೨೪-೨೫ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿದ್ದು, ಡೇ-ನಲ್ಮ್ ಅಭಿಯಾನದ ಉಪ ಘಟಕಗಳು ಮತ್ತು ಪಿಎಂ ಸ್ವನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡಿ ಜ್ಞಾನ ಮತ್ತು ಕೌಶಲ್ಯ ವೃದ್ದಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿ ಕೊಡುವುದು ತರಬೇತಿಯ ಉದ್ದೇಶವಾಗಿದೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಸರ್ಕಾರದ ನಿಯಮಾನುಸಾರ ಸ್ಟೆöÊಫಂಡ್ ಪಾವತಿಸಲಾಗುವುದು.
ಆಸಕ್ತರು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ತಾ.೨೦ ರೊಳಗೆ ಅರ್ಜಿಯನ್ನು ನಗರಸಭೆ, ಮಡಿಕೇರಿ ಡೇ-ನಲ್ಮ್ ಶಾಖೆಗೆ ಸಲ್ಲಿಸಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ನಗರಸಭೆ, ಮಡಿಕೇರಿ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತ ವಿಜಯ್ ಅವರು ತಿಳಿಸಿದ್ದಾರೆ.