ಕೂಡಿಗೆ, ಸೆ. ೧೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದ ರತೀಶ್ ಎಂಬ ರಾಷ್ಟಿçÃಯ ಕಬಡ್ಡಿ ಆಟಗಾರ ರತೀಶ್ ಅವರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಸಹಾಯಧನದ ಚೆಕ್ ಅನ್ನು ಅಧ್ಯಕ್ಷ ಭಾಸ್ಕರ್ ನಾಯಕ್ ವಿತರಣೆ ಮಾಡಿದರು.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದ ರವಿಕುಮಾರ್ರವರ ಪುತ್ರ ರತೀಶ್ ಮಂಗಳೂರು ಎಸ್.ಡಿ.ಎಂ. ಕಾಲೇಜಿನಲ್ಲಿ ಮೊದಲನೇ ವರ್ಷದ ಬಿ.ಎ. ಪದವಿ ವ್ಯಾಸಂಗ ಮಾಡುತ್ತಿದ್ದು, ಗೋವಾ ರಾಜ್ಯದಲ್ಲಿ ನಡೆದ ೨೦೨೪ನೇ ಸಾಲಿನ ರಾಷ್ಟಿçÃಯ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾಗಿ ಅಂತರರಾಷ್ಟಿçÃಯ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾಗಿದ್ದು, ಇವರಿಗೆ ಕೂಡುಮಂಗಳೂರು ಪಂಚಾಯಿತಿ ವತಿಯಿಂದ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರೋತ್ಸಾಹಧನದ ಚೆಕ್ ನೀಡಲಾಯಿತು. ಈ ಸಂದರ್ಭ ಅಭಿವೃದ್ಧಿ ಅಧಿಕಾರಿ ಸಂತೋಷ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.