ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆಯಲ್ಲಿ ವೀರಶೈವ ಸಮಾಜದ ವತಿಯಿಂದ ಅದ್ದೂರಿ ಯಾಗಿ ಶ್ರೀ ಗೌರಿ-ಗಣೇಶನನ್ನು ಪ್ರತಿಷ್ಠಾಪಿಸಿ, ಗಣೇಶೋತ್ಸವ ಸಂಭ್ರಮದಿAದ ಆಚರಿಸಲಾಯಿತು.

ಶಿವಪುರದ ಗೌರಿಕಟ್ಟೆಯಲ್ಲಿ ವೀರಶೈವ ಸಮಾಜ ಬಾಂಧವರು ಸ್ವರ್ಣ ಗೌರಿಯನ್ನು ಪೂಜಿಸಿ, ಗಂಗೆ ಪೂಜೆ ಮಾಡಿ, ಹೂವಿನ ಪಲ್ಲಕ್ಕಿಯಲ್ಲಿ ಕೂರಿಸಿ ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆಯಲ್ಲಿ ಸಾಗಿ, ಶ್ರೀ ಬಸವೇಶ್ವರ ದೇವಾಲಯದಲ್ಲಿ ಆರತಿಯೊಂದಿಗೆ ಸ್ವಾಗತಿಸಿ ಪ್ರತಿಷ್ಠಾಪಿಸಲಾಯಿತು. ಗಣೇಶ ಚತುರ್ಥಿಯಂದು ನಂದಿಪುರ ಕೆರೆಯಿಂದ ಶ್ರೀಗಣೇಶನನ್ನು ಲಿಂಗದೀಕ್ಷೆಯೊAದಿಗೆ ಪೂಜಿಸಿ, ಹೂವಿನ ಪಲ್ಲಕ್ಕಿಯಲ್ಲಿ ಕೂರಿಸಿ, ನಂದಿಧ್ವಜ ಕುಣಿತದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ದಾಗ ಆರತಿ ಬೆಳಗಿ ಸ್ವಾಗತಿಸಿ ಶ್ರೀ ಬಸವೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು.

ದೇವಾಲಯದಲ್ಲಿ ಪ್ರತಿದಿನ ವಿಶೇಷ ಪೂಜಾ ಕೈಂಕರ್ಯಗಳು ನಡೆದು ತೀರ್ಥ-ಪ್ರಸಾದ ವಿನಿಯೋಗವಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ. ಅ.೩ ರಂದು ಶ್ರೀಗೌರಿ-ಶ್ರೀಗಣೇಶ ವಿಸರ್ಜನೋತ್ಸವ ವಿಜೃಂ ಭಣೆಯಿಂದ ನಡೆಯಲಿದೆ ಎಂದು ವೀರಶೈವ ಸಮಾಜದ ಬಾಂಧವರು ತಿಳಿಸಿದ್ದಾರೆ.ಕೂಡಿಗೆ: ಕೂಡಿಗೆಯ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಹಾಗೂ ಶ್ರೀ ದಂಡಿನಮ್ಮ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿ, ಮತ್ತು ಯಂಗ್ ಸ್ಟಾರ್ ಅಸೋಸಿಯೇಷನ್ ವತಿಯಿಂದ ೧೬ನೇ ವರ್ಷದ ಅದ್ದೂರಿ ಗೌರಿ ಗಣೇಶೋತ್ಸವ ಆಚರಣೆ ಅಂಗವಾಗಿ ಕೂಡಿಗೆ ಸರ್ಕಲ್ ಸಮೀಪದಲ್ಲಿರುವ ಗಣಪತಿ ಪೆಂಡಲ್‌ನ ಸಭಾಂಗಣದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿತ್ತು.

ವಿಸರ್ಜನೆಯ ಅಂಗವಾಗಿ ಶ್ರೀ ಗಣಪತಿಯ ವಿಗ್ರಹವನ್ನು ಅಲಂಕೃತವಾದ ವಿದ್ಯುತ್ ಮಂಟಪದಲ್ಲಿ ಕುಳ್ಳಿರಿಸಿ ಕೂಡಿಗೆಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ನಂತರ ಕಣಿವೆಯ ಶ್ರೀ ರಾಮಲಿಂಗೇಶ್ವ ದೇವಸ್ಥಾನ ಎದುರು ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

ಗಣೇಶೋತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಈ ಸಂದರ್ಭದಲ್ಲಿ ಯಂಗ್ ಸ್ಟಾರ್ ಅಸೋಸಿಯೇಷನ್‌ನ ಅಧ್ಯಕ್ಷ ರಕ್ಷಿತ್ ಕುಮಾರ್, ಕಾರ್ಯದರ್ಶಿ ಡಿ. ಉಮೇಶ್, ದಂಡಿನಮ್ಮ ಮತ್ತು ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಕೆ.ಕೆ. ಸೋಮಶೇಖರ್, ಕಾರ್ಯದರ್ಶಿ ಚಂದ್ರಶೇಖರ್, ಸೇರಿದಂತೆ ಸಮಿತಿಯ ನಿರ್ದೇಶಕರು, ವಿವಿಧ ಘಟಕದ ಪದಾಧಿಕಾರಿಗಳು, ಸೇರಿದಂತೆ ನೂರಾರು ಗ್ರಾಮಸ್ಥರು ಹಾಜರಿದ್ದರು.

ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮ ದಲ್ಲಿರುವ ಶ್ರೀ ಉಮಾ ಮಹೇಶ್ವರ ದೇವಾಲಯದ ಸಮಿತಿಯ ವತಿಯಿಂದ ದೇವಾಲಯದ ಸಭಾಂ ಗಣದಲ್ಲಿ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗಿದೆ.ಸುಂಟಿಕೊಪ್ಪ: ಮಧುರಮ್ಮ ಬಡಾವಣೆಯ ಪುಟಾಣಿ ಮಕ್ಕಳು ಸ್ಥಳೀಯ ಯುವಕರ ಮತ್ತು ನಿವಾಸಿಗಳ ನೆರವಿನಿಂದ ನಾಡ ಕಚೇರಿ ರಸ್ತೆಯಲ್ಲಿ ಕಂದಾಯ ಇಲಾಖೆಯ ವಸತಿ ಗೃಹಗಳ ಸಮೀಪ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಿ ಹರದೂರು ಹೊಳೆಯಲ್ಲಿ ಉತ್ಸವ ಮೂರ್ತಿಯನ್ನು ವಿಸರ್ಜಿಸಿದರು.

ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮ ದಲ್ಲಿರುವ ಶ್ರೀ ಉಮಾ ಮಹೇಶ್ವರ ದೇವಾಲಯದ ಸಮಿತಿಯ ವತಿಯಿಂದ ದೇವಾಲಯದ ಸಭಾಂ ಗಣದಲ್ಲಿ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗಿದೆ.ಸುಂಟಿಕೊಪ್ಪ: ಮಧುರಮ್ಮ ಬಡಾವಣೆಯ ಪುಟಾಣಿ ಮಕ್ಕಳು ಸ್ಥಳೀಯ ಯುವಕರ ಮತ್ತು ನಿವಾಸಿಗಳ ನೆರವಿನಿಂದ ನಾಡ ಕಚೇರಿ ರಸ್ತೆಯಲ್ಲಿ ಕಂದಾಯ ಇಲಾಖೆಯ ವಸತಿ ಗೃಹಗಳ ಸಮೀಪ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಿ ಹರದೂರು ಹೊಳೆಯಲ್ಲಿ ಉತ್ಸವ ಮೂರ್ತಿಯನ್ನು ವಿಸರ್ಜಿಸಿದರು.

ಮಡಿಕೇರಿ: ಕೆದ ಮುಳ್ಳೂರು ತೆರ್ಮೆಮೊಟ್ಟೆ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೧೯ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ತಾ. ೭ರಂದು ಗಣೇಶ ಮೂರ್ತಿಯ ಪ್ರತಿಷ್ಟಾಪನೆ ಮಾಡಲಾಯಿತು.

ಹೋಮ, ಮಹಾಪೂಜೆ, ಪ್ರಸಾದ ವಿನಿಯೋಗ ಮತ್ತು ಅನ್ನ ಸಂತರ್ಪಣೆ ಮೂರು ದಿನ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆ, ಬಹು ಮಾನ ವಿತರಣೆ, ಮತ್ತು ಮನರಂಜನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಬೃಹತ್ ಪುಷ್ಪಲಂಕೃತ ಮಂಟಪದಲ್ಲಿ ಮೂರ್ತಿ ಕುಳ್ಳಿರಿಸಿ ಮೆರವಣಿಗೆಯಲ್ಲಿ ತೆರ್ಮೆಮೊಟ್ಟೆಯ ಮುಖ್ಯ ಮಾರ್ಗವಾಗಿ ಮಹಾದೇವರ ದೇವಸ್ಥಾನದವರೆಗೆ ಸಾಗಿತು. ನಂತರ ಅದೇ ಮಾರ್ಗವಾಗಿ ಬಂದು ಕೀರ್ತಿ ಹೊಳೆಯಲ್ಲಿ ಉತ್ಸವ ಮೂರ್ತಿಯನ್ನು ವಿಸರ್ಜಿಸಲಾಯಿತು.

ಮಡಿಕೇರಿ : ಕತ್ತಲೆಕಾಡು, ಜೇನುಕೊಲ್ಲಿ ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ೧೮ನೇ ವರ್ಷದ ಗೌರಿ-ಗಣೇಶೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು.

ತಾ.೭ರಂದು ಭಾರತ್ ಮಾತಾ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಿ ಗಣೇಶ ಮೂರ್ತಿ ಯನ್ನು ಟ್ರಸ್ಟ್ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು. ಅಂದು ಸಂಜೆ ಸ್ಥಳೀಯ ವಿದ್ಯಾರ್ಥಿಗಳು, ಸ್ಥಳೀಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.

೮ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಜರುಗಿತು. ಮಡಿಕೇರಿಯ ರಾಮಾಂಜನೇಯ ಭಜನಾ ಮಂಡಳಿ ಸದಸ್ಯರು ಭಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ತಾ. ೯ರಂದು ಮಧ್ಯಾಹ್ನ ಮಹಾಪೂಜೆ ಬಳಿಕ ವಿದ್ಯುತ್ ದೀಪಾಲಂಕೃತ ಮಂಟಪದಲ್ಲಿ ಗ್ರಾಮದ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿ ಬಳಿಕ ಕ್ಲೋಸ್‌ಬರ್ನ್ ಕೆರೆಯಲ್ಲಿ ವಿಸರ್ಜಿಸಲಾಯಿತು. ಬಿಡುವು ನೀಡದೆ ಸುರಿದ ಮಳೆಯ ನಡುವೆಯೂ ಸಾರ್ವಜನಿಕರು ಅತ್ಯುತ್ಸಾಹದಿಂದ ಗಣೇಶನ ಮೆರವಣಿಗೆಯಲ್ಲಿ ಪಾಲ್ಗೊಂಡರು. ಅರ್ಚಕ ಯೋಗೇಶ್ ಭಟ್ ಪೂಜಾ ಕಾರ್ಯ ನಡೆಸಿಕೊಟ್ಟರು.

ಟ್ರಸ್ಟ್ ಅಧ್ಯಕ್ಷ ಹೊನ್ನಪ್ಪ, ಉಪಾಧ್ಯಕ್ಷ ಚಂದ್ರಶೇಖರ ರೈ, ಕಾರ್ಯದರ್ಶಿ ಬ್ರಿಜೇಶ್ ಖಜಾಂಚಿ ನವೀನ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಅಶೋಕ, ಖಜಾಂಚಿ ಸತೀಶ್ ರೈ, ಸಹ ಖಜಾಂಚಿ ಜಯಪ್ರಕಾಶ್, ಕಾರ್ಯದರ್ಶಿ ರಾಜೇಶ್, ಮಾಜಿ ಅಧ್ಯಕ್ಷ ಲೋಕೇಶ್ ರೈ, ಮಹಿಳಾ ಘಟಕ, ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು.ಸಿದ್ದಾಪುರ: ಅಮ್ಮತ್ತಿ ಸಮೀಪದ ಕಣ್ಣಂಗಾಲ ಗ್ರಾಮದ ಶ್ರೀ ವಿಘ್ನೇಶ್ವರ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿದ ಗೌರಿ-ಗಣೇಶ ಉತ್ಸವ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು.

ಮೂರು ದಿನಗಳ ಕಾಲ ಗೌರಿ ಗಣೇಶ ಉತ್ಸವದ ಅಂಗವಾಗಿ ವಿಶೇಷ ಪೂಜೆ ಕಾರ್ಯಕ್ರಮಗಳು ನಡೆದು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ವಿಸರ್ಜನೆ ದಿನದಂದು ವಾದ್ಯಗೋಷ್ಠಿಯೊಂದಿಗೆ ಕಣ್ಣಂಗಾಲ ಗ್ರಾಮದ ವ್ಯಾಪ್ತಿಯ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ಅಲಂಕೃತ ಭವ್ಯ ಮಂಟಪದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಲಾಯಿತು. ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ವಿಸರ್ಜನಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಆಚರಣೆ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಹಾಜರಿದ್ದರು.