ನಾಪೋಕ್ಲು, ಸೆ. ೧೧: ಜನಾಂಗ ಬೌದ್ಧಿಕವಾಗಿ ಅಭಿವೃದ್ಧಿ ಹೊಂದಿದಾಗ ಮುಂದಿನ ತಲೆಮಾರು ಸುಸಂಸ್ಕೃತ ಜೀವನ ನಡೆಸಲು ಸಾಧ್ಯ ಎಂದು ಕರ್ನಾಟಕ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ ಅಭಿಪ್ರಾಯಪಟ್ಟರು.

ಮೈಸೂರಿನ ಕೊಡಗು ಗೌಡ ಸಮಾಜದ ವತಿಯಿಂದ ಸಮಾಜದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೈಲ್ ಮುಹೂರ್ತ ಸಮಾರಂಭವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಮಾತನಾಡಿ, ಗೌಡ ಜನಾಂಗಕ್ಕೆ ವಿಶಿಷ್ಠವಾದ ಭಾಷೆ ಇರುವುದೇ ಹೆಮ್ಮೆ. ಭಾಷೆಯನ್ನು ಉಳಿಸಿ ಬೆಳೆಸಲು ವೈಜ್ಞಾನಿಕ ಕ್ರಮಗಳನ್ನು ಅಳವಡಿಸುವ ಅವಶ್ಯಕತೆ ಇದೆ ಎಂದರು.

ಮಡಿಕೇರಿ ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಮಾತನಾಡಿ, ಕೊಡಗಿನ ಸಾಂಪ್ರದಾಯಿಕ ಹಬ್ಬ ಕೈಲ್ ಮುಹೂರ್ತವನ್ನು ಕೊಡಗಿನ ಹೊರಗಡೆ ನೆಲೆಸಿರುವ ಗೌಡ ಸಮಾಜದವರು ಆಚರಿಸಿಕೊಂಡು ಬರುವುದರಿಂದ ಸಮುದಾಯದ ಜನರಲ್ಲಿ ಬಾಂಧವ್ಯ ಬೆಳೆಸಲು ಸಾಧ್ಯವಾಗುತ್ತದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಮೈಸೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ವಹಿಸಿ ಮಾತನಾಡಿದರು.

ಸಮಾರಂಭದಲ್ಲಿ ೧೦ನೇ ತರಗತಿ ಮತ್ತು ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನಡೆಸ ಲಾಯಿತು. ರಾಷ್ಟçಮಟ್ಟದಲ್ಲಿ ಸಾಧನೆ ಮಾಡಿದ ಶೂಟರ್ ಕಾನಡ್ಕ ಧನ್ವಿ ಹನೀಷ್ ಮತ್ತು ಹಾಕಿಯಲ್ಲಿ ರಾಷ್ಟçಮಟ್ಟದಲ್ಲಿ ಸಾಧನೆ ಮಾಡಿದ ಕುಂಭಗೌಡನ ವಿಶ್ವಜಿತ್ ವಿನೋದ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷ ಕುದುಪಜೆ ಚಂದ್ರಶೇಖರ್, ಖಜಾಂಚಿ ನಡುವಟ್ಟೀರ ಲಕ್ಷö್ಮಣ, ನಿರ್ದೇಶಕರಾದ ಹೊಸೂರು ರಾಘವ, ಪಾಣತ್ತಲೆ ವಸಂತ, ಕೊಂಬಾರನ ಸುಬ್ಬಯ್ಯ, ಕುಂಟುಕುಣಿ ರಮೇಶ್, ತೋಟಂಬೈಲು ಇಂದಿರಾ, ಚಪ್ಪೇರ ಯಮುನಾ, ಕುಂಟುಕುಣಿ ಶೀಲಾ, ಇನ್ನಿತರರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮೊದಲು ಸಂಪ್ರದಾಯದAತೆ ಆಯುಧ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ವೇದಿಕೆಯಲ್ಲಿದ್ದ ಗಣ್ಯರು ಬಹುಮಾನವನ್ನು ವಿತರಿಸಿದರು.

ಕಾರ್ಯಕ್ರಮವನ್ನು ಸಮಾಜದ ನಿರ್ದೇಶಕ ಪಟ್ಟಡ ಶಿವಕುಮಾರ್ ನಿರೂಪಿಸಿ, ಕಾರ್ಯದರ್ಶಿ ಪೊನ್ನೇಟಿ ನಂದ ಸ್ವಾಗತಿಸಿದರು. ಸಹ ಕಾರ್ಯದರ್ಶಿ ನಡುಮನೆ ಚಂಗಪ್ಪ ವಂದಿಸಿದರು.