ಮಡಿಕೇರಿ, ಸೆ. ೧೧: ಕೊಡಗು ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಶಾಲಾ-ಕಾಲೇಜಿನ ಇಕೋ ಕ್ಲಬ್/ಎನ್.ಎಸ್.ಎಸ್. ಘಟಕಗಳ ಮೂಲಕ ಮಕ್ಕಳು ಸಮುದಾಯದಲ್ಲಿ ರಾಸಾಯನಿಕ ಬಣ್ಣ ಮತ್ತು ಪಿ.ಓ.ಪಿ. ರಹಿತ ಪರಿಸರ ಸ್ನೇಹಿ ಅರಿಶಿಣ ಮತ್ತು ಜೇಡಿಮಣ್ಣಿನಿಂದ ಗಣೇಶ ಮೂರ್ತಿ ತಯಾರಿಕೆಯ ಪರಿಸರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಶಾಲಾ-ಕಾಲೇಜಿನ ಇಕೋ ಕ್ಲಬ್/ಎನ್.ಎಸ್.ಎಸ್.ಘಟಕಗಳ ಮೂಲಕ ಮಕ್ಕಳು ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಬಣ್ಣ ಮತ್ತು ಪಿ.ಓ.ಪಿ.ರಹಿತ ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿ ತಯಾರಿಕೆಯ ಪರಿಸರ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ ಎಂದು ಪರಿಸರ ಸ್ನೇಹಿ ಗಣೇಶೋತ್ಸವ ಅಭಿಯಾನದ ಜಿಲ್ಲಾ ಸಂಚಾಲಕ ಟಿ.ಜಿ.ಪ್ರೇಮಕುಮಾರ್ ತಿಳಿಸಿದ್ದಾರೆ.

ಮಕ್ಕಳಿಂದ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ: ಜಿಲ್ಲೆಯಲ್ಲಿ ಕೈಗೊಂಡ ಪರಿಸರ ಸ್ನೇಹಿ ಗಣೇಶೋತ್ಸವ ಸಂದರ್ಭದಲ್ಲಿ ವಿವಿಧ ಪಟ್ಟಣ, ಗ್ರಾಮಗಳಲ್ಲಿ ಶಾಲಾ ಮಕ್ಕಳು ಸ್ವತಃ ತಾವೇ ಜೇಡಿಮಣ್ಣಿನಿಂದ ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಜನರ ಗಮನ ಸೆಳೆದಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್ ತಿಳಿಸಿದ್ದಾರೆ.