ಕೂಡಿಗೆ, ಸೆ. ೧೧: ಕೂಡಿಗೆ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಕಾಲೇಜು ಹಾಗೂ ಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಮಾತನಾಡಿ, ರಾಧಾಕೃಷ್ಣನ್ ಅವರಿಗೆ ಪ್ರತಿಯೊಬ್ಬ ಶಿಕ್ಷಕರಿಗೂ ಅವರ ಆದರ್ಶವನ್ನು ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಯೋಗ ಬೇಕೆಂದರು.

ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಟಿ.ಪಿ. ಹಮೀದ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಬಸಪ್ಪ ವಹಿಸಿದ್ದರು. ಕೂಡಿಗೆ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಯೋಗೇಶ್, ಭೌತಶಾಸ್ತç ಶಿಕ್ಷಕ ಗುರು ಸ್ವಾಮಿ ಮತ್ತು ಕಾಲೇಜು ಶಿಕ್ಷಕರ ವೃಂದದವರನ್ನು ಸನ್ಮಾನಿಸಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೋಮಶೇಖರ್, ನಿರ್ದೇಶಕರು ಹಾಗೂ ಕಾಲೇಜು ಉಪನ್ಯಾಸಕರು ಹಾಜರಿದ್ದರು.