ಮಡಿಕೇರಿ, ಸೆ. ೧೧: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಯಿಂದ ಅಕ್ಟೋಬರ್ ೧ ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಜಿಲ್ಲಾ ಮಟ್ಟದಲ್ಲಿ ಆಚರಿಸುವ ಸಂಬAಧ ಹಿರಿಯ ನಾಗರಿಕರಿಗೆ ತಾ. ೧೭ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕ್ರೀಡಾ ಸ್ಪರ್ಧೆಗಳು (ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು) ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು (ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ) ಸ್ಪರ್ಧೆಗಳನ್ನು ವಯೋಮಿತಿವಾರು (೬೦-೬೯ ಹಾಗೂ ೭೦ ವರ್ಷ ಮೇಲ್ಪಟ್ಟವರು) ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಆಯೋಜಿಸಲಾಗುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಹಿರಿಯ ನಾಗರಿಕರು ಸ್ಪರ್ಧೆಯ ದಿನದಂದು ವಯಸ್ಸಿನ ದೃಢೀಕರಣಕ್ಕಾಗಿ ಹಿರಿಯ ನಾಗರಿಕರ ಗುರುತಿನ ಚೀಟಿ/ ಆಧಾರ್ ಕಾರ್ಡ್/ ಓಟರ್ ಐಡಿ ಇವುಗಳಲ್ಲಿ ಯಾವುದಾದರು ಒಂದರ ನಕಲು ಪ್ರತಿ ತರುವುದು. ಕೊಡಗು ಜಿಲ್ಲೆಯ ಹಿರಿಯ ನಾಗರಿಕರು ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಕೋರಲಾಗಿದೆ.

ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ. ೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಅವರು ತಿಳಿಸಿದ್ದಾರೆ.