ಚೆಯ್ಯುಂಡಾಣೆ, ಸೆ. ೧೧: ನರಿಯಂದಡ ಗ್ರಾಮದಲ್ಲಿ ಕಾಡಾನೆ ಹಾವಳಿ ಮರುಕಳಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.
ನರಿಯಂದಡ ಗ್ರಾಮದ ಮಕ್ಕಿಮನೆ ಜಯ ಹಾಗೂ ಗೌರಮ್ಮ ಅವರ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಕಾಫಿ, ಅಡಿಕೆ, ಬಾಳೆ ಗಿಡಗಳನ್ನು ತುಳಿದು ನಾಶಪಡಿಸಿವೆ ಹಾಗೂ ಇವರ ಮನೆಗೆ ತೆರಳುವ ರಸ್ತೆಯಲ್ಲಿರುವ ವಿದ್ಯುತ್ ಕಂಬಕ್ಕೆ ಬೈನೆ ಮರವನ್ನು ಉರುಳಿಸಿದ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ, ಕೂಡಲೇ ಚೆಸ್ಕಾಂ ಇಲಾಖೆ ವಿದ್ಯುತ್ ಕಂಬವನ್ನು ಸರಿಪಡಿಸಬೇಕು, ಅರಣ್ಯ ಇಲಾಖೆ ಕಾಡಾನೆ ತೋಟಕ್ಕೆ ನುಸುಳದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ನಷ್ಟ ಸಂಭವಿಸಿದ ತೋಟದ ಮಾಲೀಕರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. -ಅಶ್ರಫ್