ಕೂಡಿಗೆ, ಸೆ. ೧೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು, ಮಾವಿನಹಳ್ಳ, ಕಾಳಿದೇವನ ಹೊಸೂರು, ಗ್ರಾಮಗಳಿಗೆ ಸಂಬAಧಿಸಿದAತೆ ವಿಶೇಷ ಸಭೆಯನ್ನು ನಡೆಸುವಂತೆ ಮೈಸೂರು ಪ್ರಾದೇಶಿಕ ಆಯುಕ್ತರ ಕಾರ್ಯಾಲಯದಿಂದ ಜಿಲ್ಲಾಧಿಕಾರಿ ಅವರಿಗೆ ಹಾಗೂ ಗ್ರಾಮ ಪಂಚಾಯಿತಿಗೆ ಪತ್ರವನ್ನು ನೀಡಲಾಗಿದೆ. ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರು ಗ್ರಾಮಗಳ ಗ್ರಾಮಸ್ಥರು ಕೂಡಿಗೆ ಗ್ರಾಮ ಪಂಚಾಯಿತಿಗೆ ನೀಡಿದ ಮನವಿಯ ಮೇರೆಗೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯಲ್ಲಿ ಚರ್ಚಿಸಿ ನಂತರ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯಕ್ಕೆ ಪತ್ರವನ್ನು ಬರೆಯಲಾಗಿತ್ತು.