ಮಡಿಕೇರಿ, ಸೆ. ೧೧: ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜು ಇದೇ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ವಜ್ರ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಈ ಹಿನ್ನಲೆ ಸಂಸ್ಥೆಯ ಹಳೆ ವಿದ್ಯಾರ್ಥಿಗಳನ್ನು ಒಟ್ಟು ಸೇರಿಸುವ ಉದ್ದೇಶದಿಂದ ತಾ.೨೨ರಂದು ಬೆಳಿಗ್ಗೆ ೧೦ ಗಂಟೆಗೆ ಸಂಸ್ಥೆಯ ಸಭಾಂಗಣದಲ್ಲಿ ಹಳೇ ವಿದ್ಯಾರ್ಥಿಗಳ ಸಭೆಯನ್ನು ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಂಘ ರಚನೆ ಹಾಗೂ ಸಂಸ್ಥೆಯ ವಜ್ರ ಮಹೋತ್ಸವ ಆಚರಣೆ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ಸಂಸ್ಥೆಯ ಪ್ರಾಂಶುಪಾಲ ಮಂದಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕೆ.ವಿ. ರಾಜ ಸುಂದರA ೯೪೮೨೨೪೬೭೦೫, ಎಲ್ ಪಿ ಪಾಲಾಕ್ಷ ೯೪೮೧೮೮೨೮೦೩, ಕೆ ಎಸ್ ಅಶ್ವಿನಿ ೯೪೮೧೪೬೯೮೦೯ ಇವರುಗಳನ್ನು ಸಂಪರ್ಕಿಸಬಹುದಾಗಿದೆ.