ಮಡಿಕೇರಿ, ಸೆ. ೧೨: ಮಡಿಕೇರಿ ತಹಶೀಲ್ದಾರ್ ಕಚೇರಿ ಸಿಬ್ಬಂದಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಮೂಲತಃ ಹಾಸನದವರಾಗಿದ್ದು, ಮಡಿಕೇರಿ ಗೌಳಿಬೀದಿಯಲ್ಲಿ ವಾಸವಿದ್ದು ತಹಶೀಲ್ದಾರ್ ಕಚೇರಿಯಲ್ಲಿ ೪ ವರ್ಷಗಳಿಂದ ಪ್ರಥಮ ದರ್ಜೆ ಸಹಾಯಕರಾಗಿರುವ ಪ್ರಜ್ವಲ್ (೪೧) ಎಂಬವರೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಮೊನ್ನೆ ರಾತ್ರಿ ವಿಷ ಸೇವಿಸಿದ ಇವರನ್ನು ಜಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲಸದ ಒತ್ತಡವೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎನ್ನಲಾಗಿದೆ.