ಮಡಿಕೇರಿ, ಸೆ. ೧೨: ಸುವರ್ಣ ಕರ್ನಾಟಕ ೫೦ರ ಸಂಭ್ರಮ ಪ್ರಯುಕ್ತ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂರ್ನಾಡು ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ವಿಷಯ ಸಂಕಲನ ಪುಸ್ತಕ ಬಿಡುಗಡೆ ತಾ.೧೪ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಕಾವೇರಿ ಸಭಾಂಗಣದಲ್ಲಿ ನಡೆಯಲಿದೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಮೂರ್ನಾಡು ಪದವಿಪೂರ್ವ ಕಾಲೇಜಿನ ಅಧ್ಯಕ್ಷರಾದ ಡಾ.ಚೌರಿರ ಜಗತ್ ತಿಮ್ಮಯ್ಯ, ನಿಯೋಜಿತ ಹೋಬಳಿ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ, ಸಾಹಿತಿ ಗೌರಮ್ಮ ಮಾದಮಯ್ಯ, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಪಿ.ಅನೂಪ್ ಮಾದಪ್ಪ, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.