ನಾಗಮಂಗಲ ಗಲಭೆ: ನಿರ್ದಾಕ್ಷಿಣ್ಯ ಕ್ರಮ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ. ೧೨: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲು ತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯವಾಗಿದ್ದು, ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿರುವ ಘಟನೆ ಸಂಬAಧ ಪ್ರತಿಕ್ರಿಯೆ ನೀಡಿರುವ ಅವರು, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬAಧ ಈಗಾಗಲೇ ೫೦ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆಂದು ಹೇಳಿದ್ದಾರೆ.

ಮುಡಾ ಹಗರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, ಸೆ. ೧೨: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿದ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ತೀರ್ಪು ಕಾಯ್ದಿರಿಸಲಾಗಿದೆ ಮತ್ತು ಮಧ್ಯಂತರ ಆದೇಶ ಮುಂದುವರಿಯುತ್ತದೆ ಎಂದು ಹೇಳಿದೆ. ಈಗಾಗಲೇ ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಇಂದು ಮುಖ್ಯಮಂತ್ರಿಗಳ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದರು. ರಾಜ್ಯಪಾಲರು ೨೩ ವರ್ಷದ ಹಳೆಯ ಪ್ರಕರಣದ ತನಿಖೆಗೆ ಅನುಮತಿ ನೀಡಿದ್ದಾರೆ. ಇದು ರಾಷ್ಟçಪತಿ ಆಳ್ವಿಕೆಗಿಂತ ಹೆಚ್ಚು ರಾಜಕೀಯ ಪ್ರೇರಿತ. ಸೆಕ್ಷೆನ್ ೧೭ಎ ಅಡಿ ಅನುಮತಿ ನೀಡುವಾಗ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಪಾಲಿಸದಿದ್ದರೆ ಅದಕ್ಕೆ ಸೂಕ್ತ ಕಾರಣ ನೀಡುವ ಹೊಣೆ ರಾಜ್ಯಪಾಲರ ಮೇಲಿದೆ. ಆದರೆ ಭಿನ್ನ ನಿಲುವಿಗೆ ಕಾರಣ ನೀಡಬೇಕೆಂಬುದು ನಿಮ್ಮ ವಾದವೇ? ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಂಘ್ವಿ, ಸಚಿವ ಸಂಪುಟದ ಶಿಫಾರಸನ್ನು ಸಾರಾಸಗಟಾಗಿ ತಳ್ಳಿಹಾಕುವಂತಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸ್ಸು ತಪ್ಪೆಂದು ಹೇಳಿಲ್ಲ. ಹೀಗಾಗಿ ಕಾರಣವೇ ಹೇಳದೆ ಸಚಿವ ಸಂಪುಟದ ಕ್ರಮ ತಾರತಮ್ಯಪೂರಿತವೆನ್ನಲಾಗದು ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದರು. ಸುದೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶ ಎಂ. ನಾಗಪ್ರಸನ್ನ ಅವರು ತೀರ್ಪು ಕಾಯ್ದಿರಿಸಿದ್ದಾರೆ.

ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಉನ್ನತೀಕರಣಕ್ಕೆ ಆದ್ಯತೆ

ಬೆಂಗಳೂರು, ಸೆ. ೧೨: ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು, ಅತ್ಯಾಧುನಿಕ ಉಪಕರಣಗಳು ಮತ್ತು ವಿಶೇಷ ಸೌಲಭ್ಯ ಒದಗಿಸುವ ಮೂಲಕ ಪರಿವರ್ತನೆಗೆ ಒತ್ತು ನೀಡಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಗುರುವಾರ ನಡೆದ ಸರಕಾರಿ ದಂತ ವೈದ್ಯಕೀಯ ಕಾಲೇಜಿನ ಪದವಿ ಪ್ರದಾನ ಸಮಾರಂಭ ಮತ್ತು ಹೊಸ ಡಿಜಿಟಲ್ ಡೆಂಟಿಸ್ಟ್ರಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ದೇಶದ ಅತ್ಯಂತ ಹಳೆಯ ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಇದು ಒಂದಾಗಿದೆ ಹಾಗೂ ಒಟ್ಟಾರೆಯಾಗಿ ನಾಲ್ಕನೇ ಅತ್ಯುತ್ತಮ ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ ಎಂದು ಸಂಸ್ಥೆಯ ಪರಂಪರೆಯ ಬಗ್ಗೆ ಬೆಳಕು ಚೆಲ್ಲಿದರು. ೧೯೫೮ರಲ್ಲಿ ಸ್ಥಾಪನೆಯಾದ ಈ ಕಾಲೇಜು, ದಂತ ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯಲ್ಲಿ ಆರು ದಶಕಗಳ ಕಾಲ ಸೇವೆ ಒದಗಿಸಿದೆ. ಈ ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆ ನಮ್ಮ ರಾಜ್ಯದ ಹೆಮ್ಮೆಯಾಗಿದೆ. ಈಗ ಎಲ್ಲಾ ರಂಗಗಳಲ್ಲಿ ಆಧುನೀಕರಣದ ಅಗತ್ಯವಿದೆ. ಶೀಘ್ರದಲ್ಲೇ ಈ ಸಂಸ್ಥೆಗೂ ಸುಧಾರಿತ ಉಪಕರಣಗಳು ಮತ್ತು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸಚಿವರು ಘೋಷಿಸಿದರು. ವೈದ್ಯಕೀಯ ಪದವೀಧರರು ವೃತ್ತಿಪರ ಕ್ಷೇತ್ರಕ್ಕೆ ಕಾಲಿಡುತ್ತಿದ್ದಂತೆ, ಪ್ರತಿಯೊಬ್ಬ ರೋಗಿಯು ವಿಐಪಿ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಮತ್ತು ರೋಗಿಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪರಿಣಾಮಕಾರಿ ಸಂವಹನ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದರು. ಅತ್ಯಾಧುನಿಕ ಡಿಜಿಟಲ್ ಡೆಂಟಿಸ್ಟ್ರಿ ಕೇಂದ್ರ ಸಿಸ್ಟಮ್‌ಗಳು ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ, ದಂತ ವೈದ್ಯಶಾಸ್ತ್ರದಲ್ಲಿ ಕ್ರಾಂತಿಯನ್ನುAಟು ಮಾಡಿದೆ ಎಂದು ಸಚಿವರು ವಿವರಿಸಿದರು. ಅದಾನಿ ಫೌಂಡೇಶನ್‌ನ ಸಹಯೋಗದೊಂದಿಗೆ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದು ಕೋನ್ ಬೀಮ್ ಕಂಪ್ಯೂಟೆಡ್ ಟೊಮೊಗ್ರಫಿ ಸೌಲಭ್ಯವನ್ನು ಒಳಗೊಂಡು, ಶಸ್ತ್ರಚಿಕಿತ್ಸೆ ಮತ್ತು ಇಂಪ್ಲಾAಟಾಲಜಿ ಸೌಲಭ್ಯ ಹೊಂದಿದೆ. ಸುಧಾರಿತ ರೂಟ್ ಕೆನಾಲ್ ಚಿಕಿತ್ಸೆ ಸೌಲಭ್ಯಕ್ಕಾಗಿ ಮೈಕ್ರೊಸ್ಕೋಪಿಕ್ ಎಂಡೋಡಾAಟಿಕ್ಸ್, ತಂತ್ರಜ್ಞಾನ ದೊರೆಯಲಿದೆ. ಜೊತೆಗೆ ಪಾಲಿಮರೇಸ್ ಚೈನ್ ರಿಯಾಕ್ಷನ್ (ಪಿಸಿಆರ್) ತಂತ್ರಜ್ಞಾನದ ಬಳಕೆಯಿಂದ ಹಲ್ಲಿನ ಸೋಂಕುಗಳ ಪತ್ತೆಗೆ ಮತ್ತು ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು.

ಭಾರತದ ಮೂಲದ ಇಸ್ರೇಲ್ ಯೋಧ ಸಾವು

ಜೆರುಸಲೇಂ, ಸೆ. ೧೨: ಪ್ಯಾಲೇಸ್ತಿನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ನಡುವೆ ವೆಸ್ಟ್ ಬ್ಯಾಂಕ್‌ನ ಬೈಟ್ ಎಲ್ ಸೆಟಲ್‌ಮೆಂಟ್ ಬಳಿ ವಾಹನ ವೊಂದನ್ನು ನುಗ್ಗಿಸಿ, ಬೆನೈ ಮನಾಶೆ ಸಮುದಾಯಕ್ಕೆ ಸೇರಿದ ಭಾರತ ಮೂಲದ ೨೪ ವರ್ಷದ ಯೋಧ ಸಾವನ್ನಪ್ಪಿರುವುದಾಗಿ ಸಮುದಾಯದ ಸದಸ್ಯರು ತಿಳಿಸಿದ್ದಾರೆ. ನೋಫ್ ಹಗಲಿಲ್ ನಿವಾಸಿ ಗೆರಿ ಗಿಡಿಯಾನ್ ಹಂಗಲ್ ಮೃತ ಯೋಧ. ಈತ ಕೆಫಿರ್ ಬ್ರಿಗೇಡ್ ನಹ್ಯೋನ್ ಬೆಟಾಲಿ ಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಇಸ್ರೇಲಿ ಸೇನೆ ಮಾಹಿತಿ ನೀಡಿದೆ. ಪ್ಯಾಲೇಸ್ತಿನ್ ಪರವಾನಗಿ ಹೊಂದಿರುವ ಟ್ರಕ್‌ವೊಂದು ಬಸ್ ನಿಲ್ದಾಣದ ಪಕ್ಕದಲ್ಲಿರುವ ಇಸ್ರೇಲ್ ರಕ್ಷಣಾ ಪಡೆಯ ಭದ್ರತಾ ಪೋಸ್ಟ್ಗೆ ವೇಗದಲ್ಲಿ ನುಗ್ಗಿ ದಾಳಿ ನಡೆಸಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ. ದಾಳಿ ನಡೆಸಿದ ಶಂಕಿತನನ್ನು ಸೆಂಟ್ರಲ್ ವೆಸ್ಟ್ ಬ್ಯಾಂಕ್‌ನ ರಫತ್ ನಗರದ ನಿವಾಸಿ ೫೮ ವರ್ಷದ ಹೈಲ್ ಧೈಫಲ್ಲಾ ಎಂದು ಇಸ್ರೇಲ್ ಸೇನೆ ತಿಳಿಸಿದೆ. ೨೦೨೦ರಲ್ಲಿ ಭಾರತದ ಈಶಾನ್ಯ ಭಾಗದಿಂದ ಇಸ್ರೇಲ್‌ಗೆ ಹಂಗಲ್ ಕುಟುಂಬ ವಲಸೆ ಬಂದಿತ್ತು. ಮಣಿಪುರ ಮತ್ತು ಮಿಜೋರಾಂನAತಹ ಭಾರತದ ಈಶಾನ್ಯ ರಾಜ್ಯಗಳಿಂದ ವಲಸೆ ಬಂದಿರುವ ಬೆನೈ ಮನಾಶೆ ಸಮುದಾಯದ ಸುಮಾರು ಯುವಕರು ಇಸ್ರೇಲ್ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.

ಸೀತಾರಾಂ ಯಚೂರಿ ನಿಧನ:ಗಣ್ಯರಿಂದ ಸಂತಾಪ

ಬೆAಗಳೂರುಮ ಸೆ. ೧೨: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ, ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಸೀತಾರಾ ಯೆಚೂರಿ ಎಡಪಕ್ಷಗಳ ಪ್ರಮುಖ ಬೆಳಕಾಗಿದ್ದರು. ಬೇರೆ ಬೇರೆ ರಾಜಕೀಯ ಪಕ್ಷ ಗಳೊಂದಿಗೂ ಸಂಪರ್ಕ ಸಾಧಿಸುವ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದ್ದರು. ಪರಿಣಾಮಕಾರಿ ಸಂಸದೀಯ ಪಟುವಾಗಿಯೂ ಗುರುತಿಸಿಕೊಂಡರು ಎಂದು ಸ್ಮರಿಸಿದ್ದಾರೆ. ಕೋಮುವಾದಿ ರಾಜಕೀಯದ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸುವಿಕೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಾ ಬಂದಿರುವ ಯಚೂರಿ ಯವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ರೂವಾರಿ ಗಳಲ್ಲೊಬ್ಬರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದ್ದಾರೆ.