ಸುಂಟಿಕೊಪ್ಪ, ಸೆ. ೧೨: ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ೨೦೨೩-೨೪ನೇ ಸಾಲಿನ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್. ಸುನಿಲ್ಕುಮಾರ್ ವಹಿಸಿದ್ದರು.
ಗ್ರಾಮ ಸಭೆಯಲ್ಲಿ ಜಿಲ್ಲಾ ಸಂಯೋಜಕರಾದ ದಿನೇಶ್ ಅವರು ೨೦೨೩-೨೪ನೇ ಸಾಲಿನ ಉದ್ಯೋಗಖಾತ್ರಿ ಮತ್ತು ೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳ ವಿವರ ಮತ್ತು ಖರ್ಚು ವೆಚ್ಚವನ್ನು ಮಂಡಿಸಿದರು. ಓಂಬಡ್ಸಮನ್ ಅಧಿಕಾರಿಗಳಾದ ಎನ್.ಎಸ್.ಮಹದೇವ ಪ್ರಸಾದ್ ಹಾಗೂ ನೊಡಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದೇಗೌಡ ಉಪಸ್ಥಿತರಿದ್ದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ಕುಮಾರ್ ಅವರು ಜ್ಯೋತಿ ಬೆಳಗಿಸುವ ಮೂಲಕ ವಿಶೇಷ ಗ್ರಾಮ ಸಭೆಗೆ ಚಾಲನೆ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ವಿ.ಜಿ. ಲೋಕೇಶ್, ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರುಗಳಾದ ಪಿ.ಎಫ್. ಸಬಾಸ್ಟೀನ್, ಹೆಚ್.ಯು. ರಫೀಕ್ಖಾನ್, ಎ. ಶಬೀರ್, ಕೆ.ಕೆ. ಪ್ರಸಾದ್ ಕುಟ್ಟಪ್ಪ, ಕೆ.ಎಂ. ಆಲಿಕುಟ್ಟಿ, ಆರ್.ಎಸ್. ವಸಂತಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಚಂದ್ರಕಲಾ, ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧಕರಾದ ವಿಕ್ರಂ ಮತ್ತು ತಂಡದವರು, ಇಂಜಿನೀಯರ್ ವಿಷ್ಣು ಸಿಬ್ಬಂದಿಗಳಾದ ಎಸ್.ಎ. ಶ್ರೀ ನಿವಾಸ್, ಇ.ಎಸ್. ಸಂಧ್ಯಾ, ಡಿ.ಎಂ. ಮಂಜುನಾಥ್ ಮತ್ತು ಸಿಬ್ಬಂದಿಗಳು ಇದ್ದರು.