ಪೊನ್ನಂಪೇಟೆ, ಸೆ. ೧೨: ಪೊನ್ನಂಪೇಟೆ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ೭೮ನೇ ಸ್ವಾತಂತ್ರ‍್ಯ ದಿನಾಚರಣೆಯ ಪ್ರಯುಕ್ತ ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆ ಆಯೋಜಿಸಿದ್ದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇAಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು. ವಿದ್ಯಾರ್ಥಿನಿ ಭಾಷಿತ ಕೆ.ಡಿ. ತೃತೀಯ ಸ್ಥಾನ ಮತ್ತು ದೇಶಭಕ್ತಿಗೀತೆಯಲ್ಲಿ ಪ್ರಥಮ ಸ್ಥಾನ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು. ವಿದ್ಯಾರ್ಥಿನಿಯರಾದ ಮೋಕ್ಷ ಎ.ಕೆ. ಮತ್ತು ರಿಶಾ ಗಣಪತಿ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ರಾಷ್ಟçಮಟ್ಟದ ಕರಾಟೆ ಚಾಂಪಿಯನ್ ಶಿಫ್ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು. ವಿದ್ಯಾರ್ಥಿನಿ ಎಂ.ಎಸ್. ನಿಶಿತ ನೀಲಮ್ಮ ಹಲವು ಬಹುಮಾನ ಪಡೆದಿದ್ದಾರೆ ಎಂದು ಸಿ.ಐ.ಪಿ.ಯು. ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ ತಿಳಿಸಿದ್ದಾರೆ.