ಚೆಯ್ಯಂಡಾಣೆ, ಸೆ. ೧೨: ಎಂದಿನAತೆ ಕರ್ತವ್ಯಕ್ಕೆ ತೆರಳಿದ್ದ ಬ್ಯಾಂಕ್ ಮ್ಯಾನೇಜರ್ ಒಬ್ಬರು ಬ್ಯಾಂಕ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕಕ್ಕಬ್ಬೆಯಲ್ಲಿ ಬುಧವಾರ ಸಂಜೆ ನಡೆದಿದೆ. ಕಕ್ಕಬ್ಬೆಯ ಯೂನಿಯನ್ ಬ್ಯಾಂಕ್ನ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜು (೪೬) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.
ಕೇರಳದ ಆಲಪುಯ ಆಯಿಕ್ಕಾಡ್ ಚಿಂಗೋಲಿ ಗ್ರಾಮದ ನಿವಾಸಿಯಾಗಿರುವ ವಿಜು ಅವರು ನಾಪೋಕ್ಲುವಿನ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದರು. ಪತ್ನಿ ಆಶಾ ಬೆಟ್ಟಗೇರಿಯ ಯೂನಿಯನ್ ಬ್ಯಾಂಕ್ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂದಿನAತೆ ಕೆಲಸಕ್ಕೆ ತೆರಳುತ್ತಿದ್ದ ದಂಪತಿ ಬುಧವಾರವು ಕೆಲಸಕ್ಕೆ ತೆರಳಿದ್ದಾರೆ. ಆದರೆ ಸಂಜೆ ೫.೩೦ರ ವೇಳೆಗೆ ಮನೆಗೆ ತಲುಪುತ್ತಿದ್ದ ವಿಜು ಅವರು ಬುಧವಾರ ತಡವಾದರೂ ಮನೆಗೆ ಬಾರದೆ ಇದ್ದು ಸಂಶಯಗೊAಡ ಪತ್ನಿ ಆಶಾ ಪತಿಯ ಮೊಬೈಲಿಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದೆ ಇದ್ದಾಗ ವಿಜು ಅವರ ಸಹೋದ್ಯೋಗಿಗಳಿಗೆ ಕರೆ ಮಾಡಿ ವಿಚಾರಿಸಿದಾಗ ವಿಜು ಬ್ಯಾಂಕಿನ ಒಳಗಿನ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕೆಲಸದಲ್ಲಿ ಒತ್ತಡವಿರುವ ಬಗ್ಗೆ ವಿಜು ಅವರು ಮನೆಯಲ್ಲಿ ಹೇಳಿಕೊಂಡಿದ್ದರು ಎಂದು ಪತ್ನಿ ಆಶಾ ನಾಪೋಕ್ಲು ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.