ಸೋಮವಾರಪೇಟೆ, ಸೆ. ೧೩: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ, ಇರುವೈಲು ರಘುರಾಮ ಅಶ್ರಣ್ಣ ಮತ್ತು ಲೀಲಾ ಅಶ್ರಣ್ಣ, ಮಂಡೇಪAಡ ಅಕ್ಕಮ್ಮ ಗಣಪತಿ, ಸ್ಮಾರಕ ದತ್ತಿ ಕಾರ್ಯಕ್ರಮ ತಾ.೧೪ರಂದು (ಇಂದು) ಸಂಜೆ ೪ ಗಂಟೆಗೆ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಲಿದೆ. ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಲಿದ್ದು, ಉಪನ್ಯಾಸ ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್ ಹಾಗೂ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಶಾಫಿ ಸಅದಿ ನಡೆಸಿಕೊಡಲಿದ್ದಾರೆ ಎಂದು ಕ.ಸಾ.ಪ. ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.