ಮಡಿಕೇರಿ, ಸೆ ೧೩: ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಅಕ್ಟೋಬರ್ ೧೦ ರಂದು ಜಾನಪದ ದಸರಾ ಉತ್ಸವವನ್ನು ಮಡಿಕೇರಿ ದಸರಾ ಉತ್ಸವದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಎಚ್.ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ೪ ವರ್ಷಗಳಿಂದ ಮಡಿಕೇರಿ ದಸರಾ ಉತ್ಸವದಲ್ಲಿ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷಾ ಸಾಹಿತ್ಯ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಜಾನಪದ ದಸರಾದಲ್ಲಿ ಈ ವರ್ಷವೂ ಕೊಡಗಿನ ಜಾನಪದ ಕಲಾವಿದರಿಗೆ ಕಲಾಪ್ರದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ, ಅ ೧೦ ರಂದು ಗುರುವಾರ ಬೆಳಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ದಸರಾ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಜಾನಪದ ದಸರಾದಲ್ಲಿ ಕಲಾ ಪ್ರದರ್ಶನ ನೀಡಲಿಚ್ಚಿಸುವ ಕಲಾವಿದರು, ಕಲಾತಂಡಗಳು ಸೆಪ್ಟೆಂಬರ್ ೨೫ ರೊಳಗಾಗಿ ಅರ್ಜಿಗಳನ್ನು ಅಧ್ಯಕ್ಷರು, ಕೊಡಗು ಜಾನಪದ ಪರಿಷತ್, ಕೇರಾಫ್ ಶಕ್ತಿ ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ - ೫೭೧೨೦೧ ಇಲ್ಲಿಗೆ ಕಳುಹಿಸಬೇಕು, ಜಾನಪದ ದಸರಾ ಸಂಬAಧಿತ ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆಗಳು - ೯೮೮೬೧೮೧೬೧೩, ಎಸ್.ಐ. ಮುನೀರ್ ಅಹಮ್ಮದ್, ೯೪೪೮೬೧೪೯೯೯ ಪ್ರಧಾನ ಕಾರ್ಯದರ್ಶಿ, ಎಸ್. ಎಸ್ ಸಂಪತ್ ಕುಮಾರ್ ಖಜಾಂಜಿ, ಕೊಡಗು ಜಿಲ್ಲಾ ಜಾನಪದ ಪರಿಷತ್.