ಮಡಿಕೇರಿ ಸೆ. ೧೩: ತಾ. ೧೪ ರಂದು (ಇಂದು) ಜಿಲ್ಲೆಗೆ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಭೇಟಿ ನೀಡಲಿದ್ದು, ದಸರಾ ಹಾಗೂ ಕಾವೇರಿ ತೀರ್ಥೋದ್ಭವ ಆಚರಣೆ ಸಂಬAಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಬೆಳಿಗ್ಗೆ ೧೧ ಗಂಟೆಗೆ ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾ ಸಂಬAಧ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ಭಾಗಮಂಡಲದಲ್ಲಿ ಭಗಂಡೇಶ್ವರ ದೇವಾಲಯದ ಹಳೆ ಮುಡಿ ಕಟ್ಟಡದಲ್ಲಿ ಕಾವೇರಿ ತೀರ್ಥೋದ್ಭವ ಹಾಗೂ ತುಲಾ ಸಂಕ್ರಮಣ ಆಚರಣೆ ಸಂಬAಧ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ತಾ. ೧೫ ರಂದು ಬೆಳಿಗ್ಗೆ ೯.೩೦ ಗಂಟೆಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.