ಮಡಿಕೇರಿ, ಸೆ. ೧೩: ಇತಿಹಾಸ ಪ್ರಸಿದ್ಧ ವೀರಾಜಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ೨೦೨೪ ನೇ ಸಾಲಿನ ಬಸವಶ್ರೀ ಪ್ರಶಸ್ತಿಗೆ ಫೆಡರೇಷನ್ ಆಫ್ ಕೊಡವ ಸಮಾಜ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ತಾ. ೧೬ರಂದು ಬಸವೇಶ್ವರ ಸಮಿತಿ ವೇದಿಕೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಎ.ಎಸ್. ಪೊನ್ನಣ್ಣ, ಗಣ್ಯರು ಭಾಗವಹಿಸಲಿದ್ದಾರೆ.