ಮಡಿಕೇರಿ, ಸೆ. ೧೩: ಉತ್ತಮ ಕಾರ್ಯನಿರ್ವಹಣೆಗಾಗಿ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿ.ಸಿ.ಸಿ. ಬ್ಯಾಂಕ್) ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಮೂಲಕ ಪ್ರಶಸ್ತಿಗೆ ಭಾಜನ ವಾಗಿದೆ. ೨೦೨೨-೨೩ನೇ ಸಾಲಿನ ಉತ್ತಮ ಕಾರ್ಯನಿರ್ವಹಣೆಗೆ ಬ್ಯಾಂಕ್ ರಾಜ್ಯದಲ್ಲಿ ೩ನೇ ಸ್ಥಾನ ಪಡೆದುಕೊಂಡಿದೆ. ಇಂದು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಡಿ.ಸಿ.ಸಿ. ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಹಾಗೂ ಅಪೆಕ್ಸ್ ಬ್ಯಾಂಕ್‌ನ ಹಿರಿಯ ಪ್ರಧಾನ ವ್ಯವಸ್ಥಾಪಕ ಹಾಗೂ ಕೊಡಗು ಡಿ.ಸಿ.ಸಿ. ಬ್ಯಾಂಕ್‌ನ ನಾಮನಿರ್ದೇಶಿತ ನಿರ್ದೇಶಕ ಮಣವಟ್ಟಿರ ಬೆಳ್ಳಿಯಪ್ಪ ಅವರುಗಳು ಪ್ರಶಸ್ತಿ ಸ್ವೀಕರಿಸಿದರು.

ಪ್ರಶಸ್ತಿ ರೂ. ೧.೫೦ ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಬ್ಯಾಂಕ್‌ನ ಕಾರ್ಯ ನಿರ್ವಹಣೆಗೆ ಆಡಿಟ್ ಮಾರ್ಕ್ ೯೩ ಲಭ್ಯವಾಗಿದೆ ಎಂದು ಬಾಂಡ್ ಗಣಪತಿ ತಿಳಿಸಿದ್ದಾರೆ.