ಮಡಿಕೇರಿ,ಸೆ.೧೩: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಮೇರಿಕಾದ ಜಾರ್ಜ್ ಟೌನ್ ವಿಶ್ವ ವಿದ್ಯಾನಿಲಯದಲ್ಲಿ ಭಾರತ ದೇಶದಲ್ಲಿ ಮೀಸಲಾತಿಯನ್ನು ರದ್ದುಪಡಿಸುವುದಾಗಿ ಹೇಳಿರುವುದನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಸಂವಾದದಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಲಾಗಿರುವ ಮೀಸಲಾತಿಯನ್ನು ತೆಗೆದುಹಾಕುವು ದಾಗಿ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ; ಡಾ. ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ ಎಲ್ಲಾ ವರ್ಗದವರಿಗೂ ಅನುಕೂಲ ವಾಗುವ ನಿಟ್ಟಿನಲ್ಲಿ ಒಳ್ಳೆಯ ಸಂವಿಧಾನವನ್ನು ರಚಿಸಲಾಗಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಬಿಜೆಪಿ ಸಂವಿಧಾನವನ್ನು ತಿದ್ದುಪಡಿ ಮಾಡಲಿದೆ ಎಂದು ಅಪಪ್ರಚಾರ ಮಾಡಿದ್ದರೂ ಜನತೆ ಬಿಜೆಪಿಯನ್ನು ಬೆಂಬಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಆದರೆ, ಇದೀಗ ರಾಹುಲ್ ಗಾಂಧಿಯವರೇ ಸಂವಿಧಾನದಡಿ ರಚಿತವಾಗಿರುವ ಮೀಸಲಾತಿಯನ್ನು ರದ್ದುಮಾಡುವು ದಾಗಿ ದೇಶವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕನಾಗಿದ್ದುಕೊಂಡು ಸಂವಿಧಾನದ ಬಗ್ಗೆ ಮಾತನಾಡುವಾಗ ಕನಿಷ್ಟ ಅದರ ಬಗ್ಗೆ ಅರಿವಿರಬೇಕು ಎಂದು ಹೇಳಿದರು. ಕರ್ನಾಟಕ ರಾಜ್ಯದಲ್ಲೂ ಕಾಂಗ್ರೆಸ್ ಸರಕಾರ ಪರಿಶಿಷ್ಟರಿಗೆ ಮೀಸಲಾಗಿರುವ ವಾಲ್ಮೀಕಿ ನಿಗಮ, ಮುಡಾ ನಿವೇಶನದಲ್ಲಿ ಹಗರಣ ಮಾಡಿದೆ. ಆದರೂ ನೈತಿಕತೆ ಇಲ್ಲದೆ ರಾಜಕೀಯ ಮಾಡುತ್ತಿದೆ. ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ ಹೊರಬಂದು ತನಿಖೆ ಎದುರಿಸಲಿ ಎಂದು ಹೇಳಿದರು.
ಗಡಿಪಾರು ಮಾಡಬೇಕು : ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ ಮಾತನಾಡಿ; ಕಳೆದ ೫೭ ವರ್ಷಗಳಿಂದ ದೇಶವನ್ನಾಳಿದ ಕಾಂಗ್ರೆಸ್ ಸರಕಾರ ದೇಶವನ್ನು ಗರೀಬಿ ಸ್ಥಾನಕ್ಕೆ ತಳ್ಳಿದೆ. ನಮ್ಮದು ಶ್ರೇಷ್ಠ ಸಂವಿಧಾನವಾಗಿದ್ದು,
(ಮೊದಲ ಪುಟದಿಂದ) ಎಲ್ಲರಿಗೂ ಸವಲತ್ತು ನೀಡುವ ನಿಟ್ಟಿನಲ್ಲಿ ರಚಿತವಾಗಿದೆ. ಆದರೆ, ರಾಹುಲ್ ಗಾಂಧಿಯವರು ಅದನ್ನು ಕೀಳುಮಟ್ಟದಲ್ಲಿ ಕಾಣುತ್ತಿದ್ದಾರೆ. ವಿಪಕ್ಷ ನಾಯಕನಾಗಿ ಹೊರದೇಶದಲ್ಲಿ ನಮ್ಮ ಸಂವಿಧಾನವನ್ನು ಟೀಕಿಸುವದು ಸರಿಯಲ್ಲ; ರಾಷ್ಟçಪತಿಗಳು ರಾಹುಲ್ ಗಾಂಧಿಯವರ ರಾಜೀನಾಮೆ
ಪಡೆದು ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಅಂಬೇಡ್ಕರ್ಗೆ ಅವಮಾನ
ಎಸ್ಸಿ ಮೋರ್ಚಾ ಅಧ್ಯಕ್ಷ ಪಿ.ಎಂ. ರವಿ ಮೊಗೇರ ಮಾತನಾಡಿ; ಸಂವಿಧಾನದಡಿಯ ಮೀಸಲಾತಿಯನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಪರಿಶಿಷ್ಟ ಜಾತಿ, ಪಂಗಡ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡಿರುವ ಅವಮಾನವಾಗಿದೆ ಎಂದು ಹೇಳಿದರು. ಇದುವರೆಗೆ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಸರಕಾರ ಪರಿಶಿಷ್ಟರನ್ನು ಯಾವ ರೀತಿಯಲ್ಲಿ ನಡೆಸಿಕೊಂಡು ಬಂದಿದೆ ಎಂಬುದು ಎಲ್ಲರಿಗೂ ತಿಳಿದಿದೆ. ತೇಜೋವಧೆ ಮಾಡುವದಲ್ಲದೆ ಪರಿಶಿಷ್ಟರನ್ನು ಶೋಷಿಸುತ್ತಲೇ ಬಂದಿದೆ. ಬಿಜೆಪಿ ಸರಕಾರ ಬಂದ ಬಳಿಕ ಪರಿಶಿಷ್ಟರಿಗೆ ಒಂದಿಷ್ಟು ಅವಕಾಶ ಸಿಕ್ಕಿದೆ. ಪರಿಶಿಷ್ಟ ವಿಭಾಗಕ್ಕೆ ಸೇರಿರುವ ಓರ್ವ ಮಹಿಳೆಗೆ ರಾಷ್ಟçಪತಿಯಂತಹ ಉನ್ನತ ಹುದ್ದೆ ನೀಡಿರುವದು ಇದಕ್ಕೊಂದು ಉದಾಹರಣೆಯಾಗಿದೆ. ಪರಿಶಿಷ್ಟರ ಉದ್ದಾರಕ್ಕಾಗಿ ಕಲ್ಪಿಸಿರುವ ಮೀಸಲಾತಿಯನ್ನು ರದ್ದುಪಡಿಸುವದಾಗಿ ರಾಹುಲ್ ಗಾಂಧಿ ಹೇಳಿಕೆಯನ್ನು ಗಮನಿಸಿದರೆ ಕಾಂಗ್ರೆಸ್ನ ದಬ್ಬಾಳಿಕೆ ನೀತಿ ಅರಿವಾಗುತ್ತದೆ. ಇಂತಹ ಹೇಳಿಕೆ ದುರದೃಷ್ಟಕರ, ಪರಿಶಿಷ್ಟರಲ್ಲೂ ಹಿಂದುತ್ವವಿದೆ, ಪರಿಶಿಷ್ಟರ ಉದ್ದಾರ ಬಿಜೆಪಿಯಿಂದ ಮಾತ್ರ ಸಾಧ್ಯವೆಂದು ಹೇಳಿದರು.
ನಂತರ ಜಿಲ್ಲಾಧಿಕಾರಿಗಳ ಮೂಲಕ ಲೋಕಸಭಾ ಸಭಾಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ವಕ್ತಾರ ಬಿ.ಕೆ. ಅರುಣ್ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ. ಲೋಕೇಶ್, ಜಿಲ್ಲಾ ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ, ತಾಲೂಕು ಅಧ್ಯಕ್ಷರುಗಳಾದ ಅಪ್ರು ರವೀಂದ್ರ, ಸುವಿನ್ ಗಣಪತಿ, ಜಿಲ್ಲಾ ಉಪಾಧ್ಯಕ್ಷ ಮನು ಮಂಜುನಾಥ್, ಪ್ರಮುಖರುಗಳಾದ ಕನ್ನಿಕೆ, ಸಬಿತ, ಶ್ವೇತಾ, ಬಿಕೆ. ಜಗದೀಶ್, ಉಮಾಪ್ರಭು, ಕಾಂಗಿರ ಸತೀಶ್, ಬೊಳ್ಳಜಿರ ಅಯ್ಯಪ್ಪ, ಅಪ್ಪಣ್ಣ, ಮುಕುಂದ ಇನ್ನಿತರರು ಪಾಲ್ಗೊಂಡಿದ್ದರು.