ಮಡಿಕೇರಿ, ಸೆ. ೧೪: ಆಲೂರು ಸಿದ್ದಾಪುರ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-೧ ಗೋಣಿಮರೂರು ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಸೆಪ್ಟೆಂಬರ್, ೧೭ ರಂದು ಬೆಳಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಬಾಣಾವರ, ಸಂಗಯ್ಯನಪುರ, ಭುವಂಗಾಲ, ಗೋಣಿಮರೂರು, ಗಣಗೂರು, ಉಂಜಿಗನಹಳ್ಳಿ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಕೋರಿದ್ದಾರೆ.