ಐಗೂರು, ಸೆ. ೧೫: ಹರದೂರು ಗ್ರಾಂ.ಪA. ವ್ಯಾಪ್ತಿಯ ಹೊಸ ತೋಟ ಭಾಗದ ಪರಿಶಿಷ್ಟ ಪಂಗಡ ಕಾಲೋನಿಯಲ್ಲಿ ಪಿಎಂ ಜಮಾನ್ ಯೋಜನೆಯಡಿ ದಾಖಲೆಗಳ ನೋಂದಣಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಜೇನುಕುರುಬರ ಜನಾಂಗದವರಿಗೆ ಆಧಾರ್ ಕಾರ್ಡ್ ನೋಂದಣಿ, ಮತದಾರರ ಗುರುತಿನ ಚೀಟಿ, ರೇಷನ್ ಕಾರ್ಡ್ ನೋಂದಣಿ, ಆಯುಷ್ಮಾನ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಮತ್ತು ಹೊಸ ಬ್ಯಾಂಕ್ ಖಾತೆ ಇಂತಹ ನೋಂದಣಿ ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಂ.ಪA. ಉಪಾಧ್ಯಕ್ಷ ಸಲೀಂಹೊಸತೋಟ, ಗ್ರಾಮ ಲೆಕ್ಕಾಧಿಕಾರಿ ದೀಪಿಕಾ, ಸಮಾಜ ಕಲ್ಯಾಣ ಇಲಾಖೆಯ ರಜನಿಕಾಂತ್, ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ಆನಂದ ಬಾಬು, ಆರೋಗ್ಯ ಇಲಾಖೆಯ ಗ್ರೀಷ್ಮಾ, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.