ಮಡಿಕೇರಿ ಸೆ. ೧೫: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ ೨೧ನೇ ವಾರ್ಷಿಕೋತ್ಸವವು ತಾ. ೨೪ ರಿಂದ ೨೬ರ ವರೆಗೆ ನಡೆಯಲಿದೆ.

ತಾ. ೨೪ ರಂದು ಸಂಜೆ ೬ ಗಂಟೆಗೆ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪಾರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ತಾ. ೨೫ ರಂದು ಬೆಳಿಗ್ಗೆ ೮ ಗಂಟೆಗೆ ಚಂಡಿಕಾ ಹೋಮ, ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಜರುಗಲಿದ್ದು, ತೀರ್ಥಪ್ರಸಾದ ವಿನಿಯೋಗ ನೆರವೇರಲಿದೆ. ಸಂಜೆ ೬ ಗಂಟೆಯಿAದ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭವಾಗಲಿದ್ದು, ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಲಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿನಿಯೋಗವಾಗಲಿದೆ.

ತಾ. ೨೬ ರಂದು ಬೆಳಿಗ್ಗೆ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಮಧ್ಯಾಹ್ನ ೧೨.೩೦ ಗಂಟೆಗೆ ಅನ್ನದಾನ ನೆರವೇರಲಿದೆ ಎಂದು ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಆಡಳಿತ ಮಂಡಳಿ ಕೋರಿದೆ.