ಮಡಿಕೇರಿ, ಸೆ. ೧೫: ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂಪಾಜೆಯಿAದ ಶಿರಂಗಾಲ ತನಕದ ೭೭ ಕಿ.ಮೀ. ಹಾದಿಯಲ್ಲಿ ಮಾನವ ಸರಪಳಿ ರಚನೆ ಮೂಲಕ ಪ್ರಜಾಪ್ರಭುತ್ವ ಬಲಪಡಿಸಲು ಜನತೆ ಕೈಜೋಡಿಸಿತು.

ಜಿಲ್ಲೆಯಾದ್ಯಂತ ತಾಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿಯೂ ಪ್ರಜಾಪ್ರಭುತ್ವ ದಿನವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು. ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿಗಳು, ಸಂಘ-ಸAಸ್ಥೆಗಳ ಸದಸ್ಯರು, ಮಹಿಳೆಯರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವ ಮೂಲಕ ಕಳೆ ತಂದರು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆರುಗು ನೀಡಿದವು.

‘ಪ್ರಜಾಪ್ರಭುತ್ವ ಮೌಲ್ಯ ಎತ್ತಿಹಿಡಿಯಿರಿ’

ಪ್ರಜಾಪ್ರಭುತ್ವ ಮೌಲ್ಯವನ್ನು ಪ್ರತಿಯೊಬ್ಬರೂ ಎತ್ತಿಹಿಡಿಯುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಕರೆ ನೀಡಿದ್ದಾರೆ. ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಪ್ರಯುಕ್ತ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಭಾನುವಾರ ನಡೆದ ಮಾನವ ಸರಪಳಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಷ್ಟçದಲ್ಲಿ ಪ್ರಜಾಪ್ರಭುತ್ವ ಜಾರಿಯಾದ ನಂತರ ನಾಗರಿಕರ ಬದುಕು ಸುಧಾರಿಸುತ್ತಿದೆ. ಆ ದಿಸೆಯಲ್ಲಿ ಪ್ರತಿಯೊಬ್ಬರಿಗೂ ಸಮಾನವಾಗಿ ಬದುಕುವ ಹಕ್ಕನ್ನು ಸಂವಿಧಾನದಲ್ಲಿ ಕಲ್ಪಿಸಲಾಗಿದೆ. ಸ್ವಾತಂತ್ರö್ಯ, ಸಮಾನತೆ, ಭ್ರಾತೃತ್ವ ಮತ್ತು ಸಹೋದರತೆ ಈ ಅಂಶಗಳು ಪ್ರಜಾಪ್ರಭುತ್ವದ ಆಶಯಗಳಾಗಿವೆ. ಯಾವುದೇ ರೀತಿಯ ಭೇದಭಾವ ಇಲ್ಲದೆ, ಸರ್ವರಿಗೂ ಸಮಾನತೆ, ಸ್ವಾತಂತ್ರ‍್ಯ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಒದಗಿಸುವುದು ಪ್ರಜಾಪ್ರಭುತ್ವದ ಮೂಲ ಮಂತ್ರವಾಗಿದೆ ಎಂದು ಹೇಳಿದರು.

ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು, ವಿದ್ಯಾರ್ಥಿಗಳು, ಶಿಕ್ಷಕರು ಪೊಲೀಸರು ಹೀಗೆ ಹಲವರು ಮಾನವ ಸರಪಳಿ ೩ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಹಾಗೂ ರಿಲೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುವುದು ಶ್ಲಾಘನೀಯ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಪ್ರಜಾಪ್ರಭುತ್ವ ಇದ್ದು, ಆ ನಿಟ್ಟಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬ ವಯಸ್ಕರಿಗೂ ಮತ ಚಲಾಯಿಸುವ ಹಕ್ಕನ್ನು ನೀಡಿದ್ದಾರೆ. ಸ್ವಾತಂತ್ರö್ಯ ಹಾಗೂ ಪ್ರಜಾಪ್ರಭುತ್ವಕ್ಕೆ ಹಲವರು ಹೋರಾಟ ಮಾಡಿದ್ದು, ಅವರನ್ನು ಮರೆಯುವಂತಿಲ್ಲ ಎಂದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಪ್ರಜಾಪ್ರಭುತ್ವ ಮೌಲ್ಯವನ್ನು ತಿಳಿಸುವಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮಾನವ ಸರಪಳಿ ಒಂದು ಉತ್ತಮ ಕಾರ್ಯಕ್ರಮ ಆಗಿದೆ. ಡಾ. ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ರಾಷ್ಟçದ ಪ್ರತಿಯೊಬ್ಬರಿಗೂ ಸಮಾನತೆ ಕಲ್ಪಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸಹ ಇತರರಂತೆ ಬದುಕು ಕಟ್ಟಿಕೊಂಡಾಗ ಪ್ರಜಾಪ್ರಭುತ್ವದ ಆಶಯಕ್ಕೆ ಮೌಲ್ಯ ದೊರೆಯಲಿದೆ ಎಂದು ಡಾ.ಮಂತರ್ ಗೌಡ ಅವರು ಪ್ರತಿಪಾದಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಂವಿಧಾನ ಪೀಠಿಕೆ ವಾಚಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಓ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನೋಡಲ್ ಅಧಿಕಾರಿ ರಾಜೇಶ್ ಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಸ್ಕೌಟ್ಸ್ ಮತ್ತು ಗೈಡ್‌ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಪ್ರಮುಖರಾದ ಎಚ್.ಎಲ್.ದಿವಾಕÀರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಮಾನವ ಸರಪಳಿ ಸಂದರ್ಭದಲ್ಲಿ ಗಣ್ಯರು ಸಾಲಾಗಿ ನಿಂತು ಕೈ ಮೇಲೆ ಮಾಡುವ ಮೂಲಕ ಜೈ ಹಿಂದ್, ಜೈ ಕರ್ನಾಟಕ ಘೋಷವಾಕ್ಯ ಮೊಳಗಿಸಿದರು. ರೇವತಿ ಮತ್ತು ತಂಡದವರು ನಾಡಗೀತೆ ಹಾಡಿದರು.

ಮಾನವ ಸರಪಳಿ ಸಂದರ್ಭದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು. ಕಲಾವಿದ ಈ. ರಾಜು ತಂಡದವರು ಗೀತಗಾಯನ ನಡೆಸಿಕೊಟ್ಟರು, ಬಸವನಹಳ್ಳಿ ಮೊರಾರ್ಜಿ ವಸತಿ ಶಾಲೆಯ ಆದಿವಾಸಿ ವಿದ್ಯಾರ್ಥಿಗಳು ಗಿರಿಜನ ನೃತ್ಯ ಪ್ರದರ್ಶಿಸಿದರು, ಡೊಳ್ಳುಕುಣಿತ ಹಾಗೂ ಲಂಬಾಣಿ ನೃತ್ಯ ಪ್ರದರ್ಶನ ಗಮನ ಸೆಳೆಯಿತು. ವಿದ್ಯಾರ್ಥಿಗಳಿಬ್ಬರು ಅಂಬೇಡ್ಕರ್ ಅವರ ವೇಷದಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಪೊಲೀಸ್ ಇಲಾಖೆಯಿಂದ ಬೈಕ್ ಮೂಲಕ ರಿಲೇ ನಡೆಸಿದ್ದು ಗಮನ ಸೆಳೆಯಿತು.