ಮಡಿಕೇರಿ, ಸೆ. ೧೫: ಪ್ರಸಕ್ತ (೨೦೨೪-೨೫) ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಇಲಾಖಾ ವೆಬ್‌ಸೈಟ್ ತಿತಿತಿ.ssಠಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ(ಮೆಟ್ರಿಕ್ ಪೂರ್ವ ಆದಾಯ ಮಿತಿ ೧ ರಿಂದ ೮ ತರಗತಿಗೆ ೬ ಲಕ್ಷ ಮತ್ತು ೯ ರಿಂದ ೧೦ನೇ ತರಗತಿಗೆ ೨.೫೦ ಲಕ್ಷ). ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್(ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಿರಬೇಕು). ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ(ಕಡ್ಡಾಯ), ಇತ್ತೀಚಿನ ಭಾವಚಿತ್ರ, ತಂದೆ, ತಾಯಿ, ಪೋಷಕರ ಆಧಾರ್ ದಾಖಲಾತಿ ಪ್ರತಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಇಲಾಖಾ ವೆಬ್‌ಸೈಟ್ ತಿತಿತಿ.ssಠಿ.ಞಚಿಡಿಟಿಚಿಣಚಿಞಚಿ.gov.iಟಿ ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೦೮೦-೪೪೫೫೪೪೫೫ ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಅವರ ಕಚೇರಿ ದೂ.ಸಂ. ೯೪೮೦೮೪೩೧೫೬, ೦೮೨೭೬-೨೮೧೧೧೫ ನ್ನು ಸಂಪರ್ಕಿಸಬಹದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.