ಸಿದ್ದಾಪುರ, ಸೆ. ೧೪: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಣ್ಣಂಗಾಲ ಗ್ರಾಮದ ಪಳ್ಳಕೆರೆ ಬಳಿ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂಧಲೆ ನಡೆಸುತ್ತಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ವೀರಾಜಪೇಟೆ ತಾಲೂಕು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಿದ್ದಾಪುರ, ಸೆ. ೧೪: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಣ್ಣಂಗಾಲ ಗ್ರಾಮದ ಪಳ್ಳಕೆರೆ ಬಳಿ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂಧಲೆ ನಡೆಸುತ್ತಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ವೀರಾಜಪೇಟೆ ತಾಲೂಕು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ಹಚ್ಚಿನಾಡು ಭಾಗದ ಪಳ್ಳಕೆರೆ ಬಳಿ ಮೂರು ಕಾಡಾನೆಗಳು ಕಂಡುಬAದವು ಎಂದು ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಮ್ ತಿಳಿಸಿದ್ದಾರೆ. ಆದರೆ, ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಸಂದರ್ಭದಲ್ಲಿ ಕಾಡಾನೆಗಳು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಅತಿ ವೇಗವಾಗಿ ಓಡುತ್ತ ಕಾರ್ಯಾಚರಣೆ ತಂಡದಿAದ ತಪ್ಪಿಸಿಕೊಂಡಿದ್ದರು. ಆದರೂ ಛಲ ಬಿಡದ ಕಾರ್ಯಾಚರಣೆ ತಂಡವು ಮೂರು ಆನೆಗಳನ್ನು ಮಾಲ್ದಾರೆ ಅರಣ್ಯದತ್ತ ಓಡಿಸಿದರು. ಆದರೆ ಕಾಫಿ ತೋಟಗಳಲ್ಲಿ ಆಹಾರಗಳನ್ನು ಅರಸಿಕೊಂಡು ಮತ್ತೆ ರಾತ್ರಿ ತೋಟದೊಳಗೆ ಲಗ್ಗೆ ಇಡುತ್ತಿರುವುದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಸರಕಾರವು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಶಾಶ್ವತ ಯೋಜನೆಯನ್ನು ರೂಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯ ಅಧಿಕಾರಿ ಜನಾರ್ದನ. ದೇವರಾಜ್. ಅರುಣ್ ಹಾಗೂ ಆನೆ ಕಾರ್ಯಪಡೆ ತಂಡ. ಆರ್ ಆರ್ ಟಿ. ತಂಡದ ಸಿಬ್ಬಂದಿಗಳು ಭಾಗವಹಿಸಿದ್ದರು.

ವರದಿ: ವಾಸು