ಕುಶಾಲನಗರ, ಸೆ. ೧೫: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಮಿತಿ ವತಿಯಿಂದ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಸದಸ್ಯರಾದ ಉಸ್ಮಾನ್, ಕುಶಾಲನಗರ ನಗರ ಸಮಿತಿ ಅಧ್ಯಕ್ಷರಾದ ಝಕರಿಯಾ, ಜಾಮಿಯಾ ಮಸೀದಿ ಕಾರ್ಯದರ್ಶಿ ರಫೀಕ್ ಮಾತನಾಡಿ, ಕೇಂದ್ರದ ನಿರ್ಧಾರವನ್ನು ಖಂಡಿಸಿದರು. ಪ್ರತಿಭಟನೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಭಾಷಾ, ಪಕ್ಷದ ಮುಖಂಡರಾದ ಅಬ್ದುಲ್ ರಹ್ಮಾನ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.