ಮಡಿಕೇರಿ, ಸೆ. ೧೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಆಚರಣೆಯು ಸೆಪ್ಟೆಂಬರ್ ೧೭ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್. ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಡಾ. ಧನಂಜಯ ಸರ್ಜಿ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕರಾದ ಎಚ್.ಎನ್. ಸುಬ್ರಮಣ್ಯ, ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಎಸ್.ಜೆ. ದೇವದಾಸ್, ಮಡಿಕೇರಿ ತಾಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಬಿ.ಜಗದೀಶ್ ಆಚಾರ್ಯ, ಸಾಹಿತಿ ಡಾ.ಜೆ. ಸೋಮಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಇತರರು ಪಾಲ್ಗೊಳ್ಳಲಿದ್ದಾರೆ.