ಮಡಿಕೇರಿ, ಸೆ. ೧೫: ಕರ್ನಾಟಕ ಮತ್ತು ಬಾಗಲಕೋಟೆ ಜಿಲ್ಲಾ ಕಿವುಡರ ಸಂಘದಿAದ ತಾ.೨೭ ರಿಂದ ಬಾಗಲಕೋಟೆಯಲ್ಲಿ ೧೪ನೇ ವರ್ಷದ ಕರ್ನಾಟಕ ರಾಜ್ಯ ಕಿವುಡರ ಕ್ರೀಡಾಕೂಟ ನಡೆಯಲಿದೆ.

ಬಾಗಲಕೋಟೆಯ ಕಾಲೇಜು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟ ದಲ್ಲಿ ಸುಮಾರು ೨೦ ಜಿಲ್ಲೆಗಳಿಂದ ಸ್ಪರ್ಧಿಗಳು ಭಾಗವಹಿಸಲಿದ್ದು, ಕೊಡಗು ಜಿಲ್ಲೆಯಿಂದಲೂ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಇಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ಗ್ವಾಲಿಯರ್‌ನಲ್ಲಿ ನಡೆಯಲಿರುವ ೨೬ನೇ ಕಿವುಡರ ರಾಷ್ಟಿçÃಯ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಪ್ರಕಟಣೆ ತಿಳಿಸಿದೆ.