ಮಡಿಕೇರಿ, ಸೆ. ೧೪: ಅಕ್ಟೋಬರ್ ೧೭ ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋದ್ಭವ ಸಂಬAಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಸೂಚಿಸಿದ್ದಾರೆ.
ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪವಿತ್ರ ತೀರ್ಥೋದ್ಭವ ಸಂಬAಧ ತಲಕಾವೇರಿಯಲ್ಲಿ ಭಕ್ತಾದಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದAತೆ ಅಧಿಕಾರಿಗಳು ಗಮನಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಈ ಬಾರಿ ಅಕ್ಟೋಬರ್ ೧೭ ರಂದು ಬೆಳಿಗ್ಗೆ ೭.೪೦ ಗಂಟೆಗೆ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿAದ ರಾತ್ರಿ ವೇಳೆಯಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ಆದ್ದರಿಂದ ಅಗತ್ಯ ಕ್ರಮವಹಿಸಬೇಕು.
ಮಳೆ ಕಡಿಮೆಯಾಗಿದ್ದು, ಕೂಡಲೇ ರಸ್ತೆ ನಿರ್ವಹಣೆ ಕೈಗೊಳ್ಳಬೇಕು. ರಸ್ತೆ ಬದಿ ಕಾಡನ್ನು ಕಡಿಬೇಕು. ಗಿಡ ಗಂಟೆ ಸಂಬAಧ ಅರಣ್ಯ ಅಧಿಕಾರಿಗಳು ತಗಾದೆ ತೆಗೆಯಬಾರದು. ಪೊಲೀಸ್ ಇಲಾಖೆ ಅಧಿಕಾರಿಗಳು ಪವಿತ್ರ ತೀರ್ಥೋದ್ಭವ ಸಂಬAಧ ಅಗತ್ಯ ಬಂದೋಬಸ್ತ್ ಮಾಡಬೇಕು.
ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಬಸ್ ಸೌಲಭ್ಯ ಒದಗಿಸುವುದು, ಕಾವೇರಿ ನೀರಾವರಿ ನಿಗಮ, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಹಂತದಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದರು.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಮಾತನಾಡಿ ಭಕ್ತಾದಿಗಳಿಗೆ ಯಾವುದೇ
ರೀತಿಯ ತೊಂದರೆಯಾಗದAತೆ ಗಮನಹರಿಸಬೇಕು. ನಾಡಿನ ಜೀವನದಿ ತಲಕಾವೇರಿಯ ಪವಿತ್ರ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಭಕ್ತಾದಿಗಳಿಗೆ ಅಗತ್ಯ ಕನಿಷ್ಟ ಮೂಲ ಸೌಲಭ್ಯ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು.
ಮಡಿಕೇರಿ-ಭಾಗಮಂಡಲ, ಕರಿಕೆ-ಭಾಗಮಂಡಲ, ವೀರಾಜಪೇಟೆ-ಭಾಗಮಂಡಲ ರಸ್ತೆಗುಂಡಿ ಮುಚ್ಚಬೇಕು. ರಸ್ತೆ ನಿರ್ವಹಣೆ ಮಾಡಬೇಕು. ಹಾಗೆಯೇ ಭಾಗಮಂಡಲ-ತಲಕಾವೇರಿ ರಸ್ತೆ ಸರಿಪಡಿಸಬೇಕು. ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ತಾತ್ಕಾಲಿಕ ಶೌಚಾಲಯ, ಕುಡಿಯುವ ನೀರು, ಮತ್ತಿತರ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ರಸ್ತೆ ಗಿಡಗಂಟೆ ಕಡಿಯುವ ಸಂಬAಧ ಲೋಕೋಪಯೋಗಿ, ಅರಣ್ಯ ಮತ್ತು ಕೆಎಸ್ಆರ್ಟಿಸಿ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ಮಾಡಿ ತುರ್ತು
(ಮೊದಲ ಪುಟದಿಂದ) ಕ್ರಮವಹಿಸುವಂತೆ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ಪ್ರತೀ ಬಾರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗುತ್ತದೆ. ಇದನ್ನು ನಿಯಂತ್ರಿಸಲು ಭಕ್ತಾದಿಗಳು ಸಹಕರಿಸಬೇಕು.
ಈ ಬಾರಿ ಬೆಳಗ್ಗಿನ ವೇಳೆ ತೀರ್ಥೋದ್ಭವ ಸಂಭವಿಸುವುದರಿAದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಆದ್ದರಿಂದ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗುವುದು ಎಂದರು. ಕೆಎಸ್ಆರ್ಟಿಸಿ ವಿಭಾಗದ ಅಧಿಕಾರಿ ಮಾತನಾಡಿ, ತೀರ್ಥೋದ್ಭವಕ್ಕೆ ಅಗತ್ಯ ಬಸ್ ಸೌಲಭ್ಯವನ್ನು ಕಳೆದ ಬಾರಿಯಂತೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಮಾತನಾಡಿ, ತೀರ್ಥೋದ್ಭವ ಜಾತ್ರ ಮಹೋತ್ಸವ ಸಂಬAಧ ಅರಣ್ಯ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಕರಿಕೆ ಗ್ರಾಮದ ಕೋಡಿ ಪೊನ್ನಪ್ಪ ಮಾತನಾಡಿ, ಕರಿಕೆ-ಭಾಗಮಂಡಲ ರಸ್ತೆ ತುಂಬಾ ಹದಗೆಟ್ಟಿದ್ದು, ಕೂಡಲೇ ರಸ್ತೆ ಅಭಿವೃದ್ಧಿಯಾಗಬೇಕು. ಹಾಗೆಯೇ ಅರಂತೋಡು-ಭಾಗಮAಡಲ ಮಾರ್ಗ ರಸ್ತೆ ಸರಿಪಡಿಸಿ ಭಕ್ತಾದಿಗಳಿಗೆ ಅನುಕೂಲ ಮಾಡಬೇಕು ಎಂದು ಕೋರಿದರು. ನೀರಾವರಿ ಇಲಾಖೆಯ ಇಇ ಪುಟ್ಟಸ್ವಾಮಿ ಅವರು ಮೇಲ್ಸುತುವೆ ಸಂಬAಧಿಸಿದAತೆ ಸುಣ್ಣ ಬಣ್ಣ ಬಳಿಯಲಾಗುವುದು, ಮಳೆ ನೀರು ಸರಾಗವಾಗಿ ಸರಿಯುವಂತಾಗಲು ಅಗತ್ಯ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹೊಸೂರು ಸತೀಶ್ ಕುಮಾರ್ ಅವರು ಮೇಲ್ಸುತುವೆ ನಿರ್ಮಾಣ ಮಾಡಿದ್ದು, ಅಲ್ಲಲ್ಲಿ ನೀರು ನಿಲ್ಲುತ್ತಿದ್ದುದನ್ನು ಸರಿಪಡಿಸುವಂತಾಗಬೇಕು ಎಂದು ಹೇಳಿದರು. ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ ಅವರು ರಸ್ತೆ ನಿರ್ವಹಣೆ ಸಂಬAಧಿಸಿದAತೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದ್ದು, ಕೂಡಲೇ ಇನ್ನೊಂದು ವಾರದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಪುಲಿಯಂಡ ಜಗದೀಶ್ ಮಾತನಾಡಿ, ಯಾವುದೇ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಶಾಸಕರು ಸ್ಥಳ ಪರಿಶೀಲಿಸಿದಲ್ಲಿ ಕಾಮಗಾರಿ ವೇಗ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ತಿಳಿಯಲಿದೆ. ಆ ನಿಟ್ಟಿನಲ್ಲಿ ಪರಿಶೀಲಿಸುವಂತಾಗಬೇಕು ಎಂದು ಅವರು ಸಲಹೆ ನೀಡಿದರು. ಪ್ರಮುಖರಾದ ಎಂ.ಬಿ.ದೇವಯ್ಯ ಅವರು ಮಾತನಾಡಿ ಮಡಿಕೇರಿ-ತಲಕಾವೇರಿ ಮಾರ್ಗ ಸಿಮೆಂಟ್ ರಸ್ತೆ ನಿರ್ಮಿಸಿದಲ್ಲಿ ಶಾಶ್ವತವಾಗಿ ರಸ್ತೆ ಇರುತ್ತದೆ ಎಂದು ಹೇಳಿದರು.
ಭಾಗಮಂಡಲ ಸ್ಥಳೀಯರೊಬ್ಬರು ತುಲಾ ಸಂಕ್ರಮಣ ಸಂದರ್ಭದಲ್ಲಿ ಭಾಗಮಂಡಲ ಗ್ರಾ.ಪಂ.ವ್ಯಾಪ್ತಿಯಲ್ಲಿ ಮಾತ್ರ ಮೀನು ಮಾಂಸ ಮಾರಾಟ ನಿಷೇಧ ಮಾಡಲಾಗುತ್ತದೆ. ಇದು ಜಿಲ್ಲೆಯಾದ್ಯಂತ ಆಗಬೇಕು ಎಂದರು. ನಗರಸಭೆ ಪೌರಾಯುಕ್ತ ವಿಜಯ್ ಅವರು ನಗರಸಭೆಯಿಂದ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ ಸ್ವಚ್ಛತೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.
ಸೆಸ್ಕ್ ಇಇ ಅನಿತಾ ಬಾಯಿ ಮಾತನಾಡಿ, ಅಗತ್ಯ ವಿದ್ಯುತ್ ಪೂರೈಸಲಾಗುವುದು. ಹೆಚ್ಚುವರಿ ವಿದ್ಯುತ್ ಪರಿವರ್ತಕ ಅಳವಡಿಕೆಗೆ ಕೂಡಲೇ ಕ್ರಮವಹಿಸಲಾಗುವುದು ಎಂದು ಹೇಳಿದರು. ಈ ಕುರಿತು ಮಾತನಾಡಿದ ಪ್ರಮುಖರಾದ ಬಿ.ಎಸ್.ತಮ್ಮಯ್ಯ ತಲಕಾವೇರಿ ತೀರ್ಥೋದ್ಭವ ಒಂದು ತಿಂಗಳ ಕಾಲ ವಿದ್ಯುತ್ ಪೂರೈಕೆ ಇಲ್ಲದೆ ತುಂಬಾ ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ಗಮನಕ್ಕೆ ತಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಜಾತ್ರೆಗೆ ಅಗತ್ಯ ವೈದ್ಯರನ್ನು ನಿಯೋಜಿಸಲಾಗುವುದು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಾತ್ರಾ ಪ್ರಯುಕ್ತ ಸ್ಥಳೀಯ ಸಾಂಸ್ಕೃತಿಕ ಹಾಡುಗಾರಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ, ತೀರ್ಥೋದ್ಭವ ಸಂದರ್ಭದಲ್ಲಿ ಕುಂಕುಮ ಹೂ ಇಟ್ಟು ತೀರ್ಥವನ್ನು ಕಲುಷಿತ ಮಾಡಬಾರದು. ಆದಷ್ಟು ಹೂ ಮತ್ತು ಕುಂಕುಮವನ್ನು ಕಡಿಮೆ ಮಾಡಬೇಕು ಎಂದು ಅವರು ಸಲಹೆ ನೀಡಿದರು. ತೆನ್ನಿರಾ ಮೈನಾ ಮಾತನಾಡಿ ಭಕ್ತಾದಿಗಳಿಗೆ ಯಾವುದೇ ಕಿರಿಕಿರಿ ಉಂಟಾಗದAತೆ ಎಲ್ಲರೂ ಎಚ್ಚರವಹಿಸಬೇಕು ಎಂದರು. ಬಿ.ಎಸ್.ತಮ್ಮಯ್ಯ ಮಾತನಾಡಿ ಕೊಡಗು ಏಕೀಕರಣ ರಂಗ ವತಿಯಿಂದ ಅನ್ನ ಸಂತರ್ಪಣೆಯನ್ನು ಮಾಡಿಕೊಂಡು ಬರಲಾಗುತ್ತಿದೆ. ಅದನ್ನು ಮುಂದುವರಿಸಿಕೊAಡು ಹೋಗಲಾಗುವುದು. ಆ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಕೋರಿದರು.
ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಧಾರ್ಮಿಕ ಆಚರಣೆ ಮತ್ತು ವಿಚಾರಗಳಿಗೆ ಸಂಬAಧಿಸಿದAತೆ ಸ್ಥಳೀಯರು ಹಾಗೂ ದೇವಾಲಯ ಸಮಿತಿಯವರು ಕುಳಿತು ನಿರ್ಧಾರ ತೆಗೆದುಕೊಳ್ಳಬೇಕು. ಈ ಬಗ್ಗೆ ಹಿರಿಯರ ಜೊತೆ ಚರ್ಚಿಸಬೇಕು. ಯಾರಿಗೂ ನೋವು ಉಂಟಾಗದAತೆ ಗಮನಹರಿಸುವುದು ಅತ್ಯವಶ್ಯಕ ಎಂದು ಹೇಳಿದರು. ಆಡಳಿತ ವಿಷಯಕ್ಕೆ ಸಂಬAಧಿಸಿದAತೆ ಅಧಿಕಾರಿಗಳಿಂದ ನಿರ್ಲಕ್ಷö್ಯ ಕಂಡುಬAದಲ್ಲಿ ಕೂಡಲೇ ಗಮನಕ್ಕೆ ತರುವಂತಾಗಬೇಕು. ಭಕ್ತಾದಿಗಳಿಗೆ ಸಮಸ್ಯೆ ಆಗದಂತೆ ಗಮನಹರಿಸುವುದು ಅತ್ಯಗತ್ಯ ಎಂದು ಹೇಳಿದರು.
ಸ್ಥಳೀಯರಾದ ಪ್ರಮೋದ್, ಕೆ.ಜೆ. ಭರತ್ ಇತರರು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಬಲ್ಲಡ್ಕ ಅಪ್ಪಾಜಿ, ಕಾಳನ ರವಿ ಹಾಗೂ ಇತರರು ಇದ್ದರು.